ಹಲಗೂರು: ಹಲಗೂರು ರಾಷ್ಟ್ರೀಯ ಹೆದ್ದಾರಿ 209ರ ಬಳಿ ಬೈಕ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟಿದ್ದಾನೆ.
ಮೂಲತಃ ಕುಂಟನದೊಡ್ಡಿ ಗ್ರಾಮದ ನಿವಾಸಿ ಚಂದ್ರಪ್ಪ ಎಂಬುವರ ಪುತ್ರ ಶಿವರಾಜು (25) ಮೃತ ಯುವಕ.
ಕಾರ್ಯನಿಮಿತ್ತ ಭಾನುವಾರ ಸಂಜೆ ಹಲಗೂರಿಗೆ ಬಂದಿದ್ದ ಆತ ವಾಪಸ್ ಗ್ರಾಮಕ್ಕೆ ತೆರಳುತ್ತಿದ್ದಾಗ ಬೈಕ್‌ಗೆ ಮಹದೇಶ್ವರ ರೈಸ್ ಮಿಲ್ ಬಳಿ ಕಾರೊಂದು ಹಿಂಬದಿಯಿಂದ ಡಿಕ್ಕಿ ಹೊಡೆಯಿತು. ತೀವ್ರ ಗಾಯಗೊಂಡ ಶಿವರಾಜು ಅವರನ್ನು ಮಳವಳ್ಳಿ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ.
ಈ ಸಂಬಂಧ ಹಲಗೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಚಾಲಕ ಕಾರಿನೊಂದಿಗೆ ಪರಾರಿಯಾಗಿದ್ದಾನೆ.