ಜಿಲ್ಲೆ

ಅಪಘಾತದಲ್ಲಿ ಬೈಕ್ ಸವಾರ ಸಾವು

ಚಾಮರಾಜನಗರ: ಚಾ.ನಗರ-ಗುಂಡ್ಲುಪೇಟೆ ರಸ್ತೆಯ ವೀರನಪುರ ಕ್ರಾಸ್ ಸಮೀಪದಲ್ಲಿರುವ ಬಣ್ಣಾರಿ ದೇವಸ್ಥಾನದ ಬಳಿ ಖಾಸಗಿ ಬಸ್ ಹಾಗೂ ಬೈಕ್ ನಡುವೆ ಶುಕ್ರವಾರ ಅಪಘಾತವಾಗಿದ್ದು, ಬೈಕ್ ಸವಾರ ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟರು.

ನಗರದ ಗಾಳೀಪುರ ಬಡಾವಣೆಯ ಆಲೀಮ್(25) ಮೃತ ದುರ್ದೈವಿ. ಈತ ಬೆಳಗ್ಗೆ ಕೆಲಸದ ನಿಮಿತ್ತ ನಗರದಿಂದ ತೆರಕಣಾಂಬಿಗೆ ತೆರಳುತ್ತಿದ್ದ ವೇಳೆಯಲ್ಲಿ ಬಣ್ಣಾರಿ ದೇವಸ್ಥಾನದ ಸಮೀಪ ಉಡಿಗಾಲ ಗ್ರಾಮದ ಮಾರ್ಗವಾಗಿ ಬರುತ್ತಿದ್ದ ಖಾಸಗಿ ಬಸ್, ಮುಂದೆ ಹೋಗುತ್ತಿದ್ದ ವಾಹನವನ್ನು ಹಿಂದಿಕ್ಕಲು ಹೋದ ಸಂದರ್ಭದಲ್ಲಿ ಎದುರಿಗೆ ಬಂದ್ ಬೈಕ್ ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ ಬೈಕ್ ಸವಾರ ಸ್ಥಳದಲ್ಲೇ ಅಸುನೀಗಿದ್ದಾನೆ.

ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಉಡಿಗಾಲ ಉಪ ಪೊಲೀಸ್ ಮತ್ತು ಚಾ.ನಗರ ಸಂಚಾರ ಠಾಣೆಯ ಪೊಲೀಸರು ಮೃತ ದೇಹವನ್ನು ಸಿಮ್ಸ್ ಆಸ್ಪತ್ರೆಯ ಶವಾಗಾರಕ್ಕೆ ಮರಣೋತ್ತರ ಪರೀಕ್ಷೆಗಾಗಿ ರವಾನಿಸಿದರು. ಈ ಸಂಬಂಧ ಚಾಮರಾಜನಗರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ.