ಜಿಲ್ಲೆ

ಅಪಘಾತದಲ್ಲಿ ಯುವಕರಿಬ್ಬರು ಸಾವು

ನಾಗಮುನ್ನೋಳಿ: ಸಮೀಪದ ಬೆಳಕೂಡ ಗೇಟ್​ ಬಳಿ ನಿಪ್ಪಾಣಿ& ಮುಧೋಳ ರಾಜ್ಯ ಹೆದ್ದಾರಿಯಲ್ಲಿ ಎರಡು ವಾಹನಗಳ ಮಧ್ಯೆ ಡಿಕ್ಕಿಯಾಗಿ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟು, ನಾಲ್ವರಿಗೆ ಗಾಯವಾದ ಟನೆ ಶುಕ್ರವಾರ ರಾತ್ರಿ ಸಂಭವಿಸಿದೆ.

ಬಾಗಲಕೋಟೆ ಜಿಲ್ಲೆ ಮುಧೋಳ ಪಟ್ಟಣದ ರಾಕೇಶ ವಾಟಕರ್​ (23), ಸೌರಭ ಕುಲಕರ್ಣಿ (22) ಮೃತ ಯುವಕರು. ಎರಡೂ ವಾಹನಗಳಲ್ಲಿದ್ದ ನಾಲ್ವರಿಗೆ ಗಾಯಗಳಾಗಿದ್ದು, ಚಿಕ್ಕೋಡಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಟನಾ ಸ್ಥಳಕ್ಕೆ ಚಿಕ್ಕೋಡಿ ಡಿವೈಎಸ್ಪಿ ಗೋಪಾಲಕೃಷ್ಣ ಗೌಡರ, ಸಿಪಿಐ ವಿಶ್ವನಾಥ ಚೌಗಲಾ, ಸಂಚಾರಿ ವಿಭಾಗದ ಪಿಎಸ್​ಐ ರೂಪಾಲಿ ಭೇಟಿ ನೀಡಿ ಪರಿಶೀಲಿಸಿದರು. ಚಿಕ್ಕೋಡಿ ಸಂಚಾರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.