ಜಿಲ್ಲೆ

ಅಪರ ಜಿಲ್ಲಾಧಿಕಾರಿ ಆರತಿ ಆನಂದ್ ಅಧ್ಯಕ್ಷತೆಯಲ್ಲಿ ಜಯಂತ್ಯುತ್ಸವ ಸಿದ್ಧತೆಗಳ ಚರ್ಚೆ

ಚಿಕ್ಕಬಳ್ಳಾಪುರ : ಅಪರ ಜಿಲ್ಲಾಧಿಕಾರಿ ಆರತಿ ಆನಂದ್ ಅಧ್ಯಕ್ಷತೆಯಲ್ಲಿ ಬುಧವಾರ ಜಿಲ್ಲಾಡಳಿತ ಭವನದಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಸ್ವಾಮಿ ವಿವೇಕಾನಂದ, ಶಿವಯೋಗಿ ಸಿದ್ದರಾಮೇಶ್ವರ, ಯೋಗಿ ವೇಮನ ಮತ್ತು ವಚನಕಾರ ಅಂಬಿಗರ ಚೌಡಯ್ಯನವರ ಜಯಂತ್ಯುತ್ಸವ ಆಚರಣೆಯ ಸಿದ್ಧತೆಗಳ ಬಗ್ಗೆ ಚರ್ಚಿಸಲಾಯಿತು.

ನುರಿತ ತಜ್ಞರಿಂದ ವಿಶೇಷ ಉಪನ್ಯಾಸ, ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಮತ್ತು ಸಾಧಕರಿಗೆ ಸನ್ಮಾನ ಸೇರಿ ಕಾರ್ಯಕ್ರಮಗಳನ್ನು ಅಚ್ಚುಕಟ್ಟಾಗಿ ಕೈಗೊಳ್ಳಬೇಕು ಎಂದು ಆರತಿ ಆನಂದ್ ವಿವಿಧ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು. ಹಾಗೆಯೇ ಸಮುದಾಯದ ಮುಖಂಡರಿಂದ ಸಲಹೆ ಸ್ವೀಕರಿಸಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ವೆಂಕಟಾಚಲಪತಿ, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಜಯಲಕ್ಷ್ಮೀ, ಜಿಪಂ ಯೋಜನಾ ನಿರ್ದೇಶಕ ಕೆ.ಗಿರಿಜಾ ಶಂಕರ್ ಮತ್ತಿತರರು ಇದ್ದರು.

ನಿಗದಿತ ದಿನದಂದು ಕಾರ್ಯಕ್ರಮ : ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜ.12 ರಂದು ಬೆಳಗ್ಗೆ 11.30 ಕ್ಕೆ ಸ್ವಾಮಿ ವಿವೇಕಾನಂದ ಜಯಂತಿ ನಡೆಯಲಿದ್ದು, ನಗರದ ಅಂಬೇಡ್ಕರ್ ಭವನದಲ್ಲಿ 14 ರಂದು ಬೆಳಗ್ಗೆ 11 ಕ್ಕೆ ಶಿವಯೋಗಿ ಸಿದ್ದರಾಮೇಶ್ವರ ಜಯಂತಿ, 19 ರಂದು ಬೆಳಗ್ಗೆ 11.30 ಕ್ಕೆ ವೇಮನ ಜಯಂತಿ, 21 ರಂದು ಮಧ್ಯಾಹ್ನ 12 ಕ್ಕೆ ವಚನಕಾರ ಅಂಬಿಗರ ಚೌಡಯ್ಯ ಜಯಂತಿ ನಡೆಯಲಿದೆ ಎಂದು ಅಪರ ಜಿಲ್ಲಾಧಿಕಾರಿ ಆರತಿ ಆನಂದ್ ತಿಳಿಸಿದ್ದಾರೆ.