ಜಿಲ್ಲೆ

ಅಪಾರ್ಟ್ಮೆಂಟ್‌ನಿಂದ ಹಾರಿ ಮಹಿಳೆ ಆತ್ಮಹತ್ಯೆ

reportermng


ಮಂಗಳೂರು: ನಗರದ ಶಿವಭಾಗ್ ಬಳಿಯ ಅಪಾರ್ಟ್ಮೆಂಟ್‌ನಿಂದ ಹಾರಿ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಭಾನುವಾರ ನಡೆದಿದೆ.
ತಾರಾ (೭೧) ಆತ್ಮಹತ್ಯೆ ಮಾಡಿಕೊಂಡ ಮಹಿಳೆ.
ಶಿವಭಾಗ್‌ನ ೫ನೇ ಕ್ರಾಸ್‌ನ ಅಪಾರ್ಟ್ಮೆಂಟ್‌ನಲ್ಲಿ ಮಗನ ಜತೆ ವಾಸಿಸುತ್ತಿದ್ದರು. ಭಾನುವಾರ ಅಪಾರ್ಟ್ಮೆಂಟ್‌ನ ಟೇರಸಿ ಮೇಲೆ ಹೋದವರು ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸುಮಾರು ೫ ವರ್ಷಗಳಿಂದ ಮಾನಸಿಕ ಖಿನ್ನತೆಗೊಳಗಾದ ಇವರಿಗೆ ಚಿಕಿತ್ಸೆ ನಡೆಯುತ್ತಿತ್ತು ಎಂದು ತಿಳಿದು ಬಂದಿದೆ.
ಕದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.