ಚಿಕ್ಕಮಗಳೂರು: ಪೋಷಣ್ ಅಭಿಯಾನದ ಭಾಗವಾಗಿ ಪೌಷ್ಠಿಕಾಂಶದ ಬಗ್ಗೆ ಸಾರ್ವಜನಿಕ ಜಾಗೃತಿ ಮೂಡಿಸಲು ಪ್ರತಿ ವರ್ಷ ಸೆಪ್ಟೆಂಬರ್ ತಿಂಗಳನ್ನು ರಾಷ್ಟಿçÃಯ ಪೋಷಣ್ ಮಾಸಾಚರಣೆ ನಡೆಸಲಾಗುತ್ತಿದೆ ಎಂದು ಶಾಸಕ ಎಚ್.ಡಿ ತಮ್ಮಯ್ಯ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಆರೋಗ್ಯ ಇಲಾಖೆ, ಶಾಲಾ ಶಿಕ್ಷಣ ಇಲಾಖೆ, ತೋಟಗಾರಿಕೆ ಇಲಾಖೆ, ಜಿಲ್ಲಾ ಆಯುಷ್ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ಆಶ್ರಯದಲ್ಲಿ ಬುಧವಾರ ನಗರದ ರಾಂಪುರದ ಚಿಂತಾಮಣಿ ಸಮುದಾಯ ಭವನದಲ್ಲಿ ಪೋಷಣ್ ಅಭಿಯಾನ ಯೋಜನೆಯಡಿ ರಾಷ್ಟಿçÃಯ ಪೋಷಣ್ ಮಾಸಾಚರಣೆ ಕಾರ್ಯಕ್ರಮದ ಉದ್ಘಾಟಿಸಿ ಮಾತನಾಡಿದರು.
ಪೋಷಣ್ ಅಭಿಯಾನದಲ್ಲಿ ಮಕ್ಕಳು, ಹದಿಹರೆಯದ ಹೆಣ್ಣುಮಕ್ಕಳು, ಗರ್ಭಿಣಿಯರು ಮತ್ತು ಹಾಲುಣಿಸುವ ತಾಯಂದಿರಲ್ಲಿ ಅಪೌಷ್ಟಿಕತೆಯನ್ನು ತಡೆಗಟ್ಟಲು, ಜೊತೆಗೆ ಪೌಷ್ಟಿಕಾಂಶ ಆಹಾರದ ಮಹತ್ವದ ಕುರಿತು ಜಾಗೃತಿ ಮೂಡಿಸಲಾಗುತ್ತದೆ ಎಂದರು.
ಮಕ್ಕಳು, ಹದಿಹರೆಯದ ಹೆಣ್ಣುಮಕ್ಕಳು, ಗರ್ಭಿಣಿಯರು ಮತ್ತು ಹಾಲುಣಿಸುವ ತಾಯಂದಿರಿಗೆ ಅಗತ್ಯವಾದ ಪೌಷ್ಟಿಕಾಂಶವನ್ನು ಒದಗಿಸುವ ಮೂಲಕ ಅವರ ಆರೋಗ್ಯವನ್ನು ಸುಧಾರಿಸುವುದು ಈ ಅಭಿಯಾನದ ಮುಖ್ಯ ಉz್ದÉÃಶ ಎಂದು ಹೇಳಿದರು.
ಗರ್ಭಿಣಿಯರು, ಬಾಣಂತಿಯರಲ್ಲಿ ಪೌಷ್ಟಿಕಾಂಶದ ಮಟ್ಟ ವೃದ್ಧಿಗಾಗಿ ಮಾತೃಪೂರ್ಣ ಹಾಗೂ ಕ್ಷೀರಭಾಗ್ಯ ಯೋಜನೆಯನ್ನೂ ಜಾರಿಗೊಳಿಸಿದೆ. ಖನಿಜಾಂಶ ಹೊಂದಿರುವ ಸೊಪ್ಪು, ತರಕಾರಿ ಜತೆ ಮೊಳಕೆ ಕಾಳುಗಳನ್ನು ಉಪಯೋಗಿಸುವ ಮೂಲಕ ಉತ್ತಮ ಆರೋಗ್ಯ ಹೊಂದಬೇಕು. ತಾಯಿ ಆರೋಗ್ಯವಾಗಿದ್ದಾಗ ಮಾತ್ರ ಆರೋಗ್ಯವಂತ ಶಿಶುವಿಗೆ ಜನ್ಮ ನೀಡಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.
ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ವಿ.ಹನುಮಂತಪ್ಪ ಮಾತನಾಡಿ, ಗರ್ಭಿಣಿಯರು, ಬಾಣಂತಿಯರು ಯಾವುದೇ ಕಾರಣಕ್ಕೂ ಅಪೌಷ್ಟಿಕತೆಯಿಂದ ಹಾಗೂ ರಕ್ತಹೀನತೆಯಿಂದ ಬಳಲದಂತೆ ಸದಾ ನಿಗಾ ವಹಿಸಬೇಕು. ಇಲ್ಲದಿದ್ದಲ್ಲಿ ಎರಡೂ ಜೀವಗಳು ಅನಾರೋಗ್ಯಕ್ಕೆ ತುತ್ತಾಗುವ ಅಪಾಯಗಳು ಹೆಚ್ಚಾಗಲಿವೆ. ಅಭಿಯಾನದ ಗಮನವು ಹದಿಹರೆಯದ ಹೆಣ್ಣುಮಕ್ಕಳು, ಗರ್ಭಿಣಿಯರು, ಹಾಲುಣಿಸುವ ತಾಯಂದಿರು ಮತ್ತು ೦-೬ ವರ್ಷ ವಯಸ್ಸಿನ ಮಕ್ಕಳ ಪೌಷ್ಟಿಕಾಂಶದ ಸ್ಥಿತಿಗೆ ಒತ್ತು ನೀಡಬೇಕು. ಒಮ್ಮುಖ ಮತ್ತು ಸಮುದಾಯದ ಒಳಗೊಳ್ಳುವಿಕೆಯ ಮೂಲಕ ಮಕ್ಕಳಲ್ಲಿ ಬೆರಗುಗೊಳಿಸುವ, ಅಪೌಷ್ಟಿಕತೆ, ರಕ್ತಹೀನತೆ ಮತ್ತು ಕಡಿಮೆ ತೂಕದ ಶಿಶು ಜನನ ಕಡಿಮೆ ಮಾಡಲು ಹಾಗೂ ಹದಿಹರೆಯದ ಹೆಣ್ಣುಮಕ್ಕಳು, ಗರ್ಭಿಣಿಯರು ಮತ್ತು ಹಾಲುಣಿಸುವ ತಾಯಂದಿರ ಮೇಲೆ ಕೇಂದ್ರೀಕರಿಸಲು ಶ್ರಮಿಸುತ್ತದೆ ಎಂದು ಹೇಳಿದರು.
ಸಂಪನ್ಮೂಲ ವ್ಯಕ್ತಿಗಳಾದ ಡಾ.ವಿದ್ಯಾ ಸಾಗರ್ ಉಪನ್ಯಾಸ ನೀಡಿ, ಗರ್ಭಾವಸ್ಥೆಯಲ್ಲಿ ಆರೋಗ್ಯಕರ ಆಹಾರಕ್ಕಾಗಿ ಹಣ್ಣುಗಳು, ತರಕಾರಿಗಳು, ಧಾನ್ಯಗಳು, ಪ್ರೋಟೀನ್ ಹಾಲು, ಮೊಸರು, ಮತ್ತು ಬೀಜಗಳನ್ನು ಹೆಚ್ಚಾಗಿ ಸೇವಿಸಬೇಕು ಎಂದರು.
ಮಗುವಿನ ಬೆಳವಣಿಗೆಗೆ ವಿಟಮಿನ್ ಎ ಕಬ್ಬಿಣ, ತರಕಾರಿಗಳು, ಕ್ಯಾಲ್ಸಿಯಂ ಮತ್ತು ಫೈಬರ್, ಹಣ್ಣು, ತರಕಾರಿಗಳು ಅಗತ್ಯವಿರುತ್ತದೆ. ಗರ್ಭಾವಸ್ಥೆಯಲ್ಲಿ ನಿರ್ದಿಷ್ಟ ಆಹಾರಗಳನ್ನು ತಪ್ಪಿಸಬೇಕು ಮತ್ತು ಕೀಟನಾಶಕಗಳು ಇರುವ ಹಣ್ಣುಗಳು, ತರಕಾರಿಗಳನ್ನು ಸಂಪೂರ್ಣವಾಗಿ ತೊಳೆದು ಸೇವಿಸಬೇಕು. ದಿನನಿತ್ಯ ಜೀವನದಲ್ಲಿ ವ್ಯಾಯಾಮ ಮಾಡುವುದನ್ನು ಅಭ್ಯಾಸ ಮಾಡಿಕೊಳ್ಳಬೇಕು ಎಂದು ಹೇಳಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಶ್ರೀನಿವಾಸ್ ವೈ.ಆಲದಾರ್ತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ನಗರಸಭೆ ಸÀದಸ್ಯ ಪರಮೇಶ್ ರಾಜ್ ಅರಸ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಅಶ್ವತ್ಥ್ಬಾಬು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ನಿರೂಪಣಾಧಿಕಾರಿ ಡಿ.ಸಂತೋಷ್, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸಿ.ರಂಗನಾಥ್, ವೈದ್ಯಾಧಿಕಾರಿ ಡಾ ಹೇಮಾಲತಾ,ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ರೂಪಕುಮಾರಿ,ಮಹಿಳಾ ಮೇಲ್ವೀಚಾರಕಿ ವಸಂತ ಕುಮಾರಿ ಉಪಸ್ಥಿತರಿದ್ದರು.