ಜಿಲ್ಲೆ

ಅಪ್ಪ ಕಾಲೇಜಿನಲ್ಲಿ ಕರ್ನಾಟಕ ರಾಜ್ಯೋತ್ಸವ

ಬೀದರ್: ತಾಲ್ಲೂಕಿನ ಗೋರನಳ್ಳಿ ಸಮೀಪದ ಲಿಂಗರಾಜ ಅಪ್ಪ ಎಂಜಿನಿಯರಿಂಗ್ ಕಾಲೇಜು ಆವರಣದಲ್ಲಿ ಕರ್ನಾಟಕ ರಾಜ್ಯೋತ್ಸವವನ್ನು ಸಡಗರದಿಂದ ಆಚರಿಸಲಾಯಿತು.

ಲಿಂಗರಾಜ ಅಪ್ಪ ಎಂಜಿನಿಯರಿಂಗ್ ಕಾಲೇಜು ನಿರ್ದೇಶಕಿ ಡಾ. ಉಮಾ ದೇಶಮುಖ ಧ್ವಜಾರೋಹಣ ಮಾಡಿದರು.ಕಲಬುರಗಿಯ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಶರಣಬಸವಪ್ಪ ಅಪ್ಪ, ಮಾತೋಶ್ರೀ ಡಾ. ದಾಕ್ಷಾಯಣಿ, ಚಿ. ದೊಡ್ಡಪ್ಪ ಅಪ್ಪ, ಕಾರ್ಯದರ್ಶಿ ಬಸವರಾಜ ದೇಶಮುಖ ಹಾಗೂ ನಿರ್ದೇಶಕ ಶರಣಬಸಪ್ಪ ದೇಶಮುಖ ಅವರ ಮಾರ್ಗದರ್ಶನದಲ್ಲಿ ಸಂಸ್ಥೆಯ ಶಾಲಾ, ಕಾಲೇಜುಗಳು ವಿದ್ಯಾರ್ಥಿಗಳ ಭವಿಷ್ಯ ಉಜ್ವಲಗೊಳಿಸಲು ಶ್ರಮಿಸುತ್ತಿವೆ ಎಂದು ಅವರು ತಿಳಿಸಿದರು.

ಲಿಂಗರಾಜ ಅಪ್ಪ ಎಂಜಿನಿಯರಿಂಗ್ ಕಾಲೇಜು ಪ್ರಾಚಾರ್ಯೆ ಡಾ. ವಿನಿತಾ ಪಾಟೀಲ, ಶರಣಬಸವೇಶ್ವರ ವಸತಿ ವಿಜ್ಞಾನ, ವಾಣಿಜ್ಯ ಹಾಗೂ ಕಲಾ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ಸತೀಶ ಪ್ರತಾಪುರ, ವಿವಿಧ ವಿಭಾಗಗಳ ಮುಖ್ಯಸ್ಥರು, ಬೋಧಕ, ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.ಶಾಲಾ, ಕಾಲೇಜು ವಿದ್ಯಾರ್ಥಿಗಳಿಂದ ನಡೆದ ಗಾಯನ, ನೃತ್ಯ ಸೇರಿದಂತೆ ವಿವಿಧ ಸಾಂಸ್ಕøತಿಕ ಕಾರ್ಯಕ್ರಮಗಳು ಎಲ್ಲರ ಗಮನ ಸೆಳೆದವು.

ಕಲಬುರಗಿಯ ಶರಣಬಸವೇಶ್ವರ ಸಂಸ್ಥಾನದ 9ನೇ ಪೀಠಾಧಿಪತಿ ಚಿ. ದೊಡ್ಡಪ್ಪ ಅಪ್ಪ ಅವರ 6ನೇ ಜನ್ಮದಿನದ ಪ್ರಯುಕ್ತ ವಿದ್ಯಾರ್ಥಿಗಳಿಗೆ ಸಿಹಿ ಹಂಚಲಾಯಿತು.ಲಿಂಗರಾಜ ಅಪ್ಪ ಎಂಜಿನಿಯರಿಂಗ್ ಕಾಲೇಜು, ಶರಣಬಸವೇಶ್ವರ ವಸತಿ ವಿಜ್ಞಾನ, ವಾಣಿಜ್ಯ ಹಾಗೂ ಕಲಾ ಕಾಲೇಜು ಮತ್ತು ಶರಣಬಸವ ಪಬ್ಲಿಕ್ ಸ್ಕೂಲ್ ವತಿಯಿಂದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.