ಎನ್.ಆರ್.ಪುರದ ಅಂಬೇಡ್ಕರ್ ವೃತ್ತದಲ್ಲಿ ಪುನೀತ್ ರಾಜ್‌ಕುಮಾರ್ ಜನ್ಮದಿನ ಆಚರಿಸಲಾಯಿತು. ಪ್ರಶಾಂತ್ ಎಲ್. ಶೆಟ್ಟಿ, ಜುಬೇದಾ, ಮಂಜುನಾಥ್, ಆನಂದ, ಕುಮಾರ ಇತರರಿದ್ದರು. 
ಜಿಲ್ಲೆ

ಅಪ್ಪು ಸಮಾಜಸೇವೆ ಮಾದರಿ

ಎನ್.ಆರ್.ಪುರ: ಹೊರ ಜಗತ್ತಿಗೆ ಗೊತ್ತಾಗದಂತೆ ನಟ ಪುನೀತ್ ರಾಜ್‌ಕುಮಾರ್ ಸಮಾಜ ಸೇವೆ ಮಾಡಿ ಮಾದರಿಯಾದರು ಎಂದು ಪಟ್ಟಣ ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷ ಪ್ರಶಾಂತ್ ಎಲ್. ಶೆಟ್ಟಿ ತಿಳಿಸಿದರು.

ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ಅಪ್ಪು ಅಭಿಮಾನಿ ಬಳಗದವರು ಅಪ್ಪು 50ನೇ ವಷರ್ದ ಜನ್ಮದಿನಾಚರಣೆ ಪ್ರಯುಕ್ತ ಬೃಹತ್ ಗಾತ್ರದ ಕಟೌಟ್‌ಗೆ ಪುಷ್ಪಾರ್ಚನೆ ಮಾಡಿ ಮಾತನಾಡಿ, ಪುನೀತ್ ರಾಜ್‌ಕುಮಾರ್ ಬಡ ಮಕ್ಕಳಿಗೆ ಉಚಿತ ಶಿಕ್ಷಣ ನೀಡಿದ್ದರು. ರಾಜ್ಯದ ಎಲ್ಲೆಡೆ ಲಕ್ಷಾಂತರ ಅಪ್ಪು ಅಭಿಮಾನಿಗಳು ಅಪ್ಪು ಜನ್ಮದಿನ ಆಚರಿಸುತ್ತಿದ್ದಾರೆ. ಅವರು ಯುವಜನರಿಗೆ ಮಾದರಿಯಾಗಿದ್ದಾರೆ ಎಂದರು.

ಪಪಂ ಸದಸ್ಯೆ ಜುಬೇದಾ ಮಾತನಾಡಿ, ಪುನೀತ್ ರಾಜ್‌ಕುಮಾರ್ ಕಲಾವಿದರಾಗಿ ಹಾಗೂ ಬಡ ಜನರ ಸೇವೆ ಮಾಡುವುದರ ಮೂಲಕ ಕನ್ನಡಿಗರ ಹೃದಯ ಗೆದ್ದರು ಎಂದರು. ಎಲ್ಲರೂ ಅಪ್ಪು ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು.

ನಾಗಲಾಪುರ ಗ್ರಾಪಂ ಸದಸ್ಯ ಮಂಜುನಾಥ್, ಅಪ್ಪು ಅಭಿಮಾನಿ ಬಳಗದ ಮುಖಂಡರಾದ ಆನಂದ, ಕುಮಾರ ಇತರರಿದ್ದರು.