ಚಿತ್ರದುರ್ಗ: ಚಳ್ಳಕೆರೆ ತಾಲೂಕೊಂದರಲ್ಲಿ ಅಪ್ರಾಪ್ತ ಬಾಲಕಿಯನ್ನು ಮದುವೆಯಾದ ಚಿಕ್ಕಮ್ಮನಹಳ್ಳಿ ಸಿ.ಬಾಬು ಎಂಬಾತನ ವಿರುದ್ಧ ಬಾಲ್ಯವಿವಾಹ ಪ್ರಕರಣ ದಾಖಲಿಸಲಾಗಿದೆ. ಬಾಲ್ಯ ವಿವಾಹದ ಮಾಹಿತಿ ಆಧರಿಸಿ ಈಚೆಗೆ ತಳಕು ಪೊಲೀಸರಿಗೆ ಆರೋಪಿ ವಿರುದ್ಧ ಪೋಕ್ಸೊ, ಬಾಲ್ಯವಿವಾಹ ನಿಷೇಧ ಕಾಯ್ದೆ ದೂರು ದಾಖಲಿಸಿದ್ದು, ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಭಾರತಿ ಆರ್.ಬಣಕಾರ್ ತಿಳಿಸಿದ್ದಾರೆ.