ಜಿಲ್ಲೆ

ಅಪ್ರಾಪ್ತೆ ಮೇಲೆ ಅತ್ಯಾಚಾರಕ್ಕೆ ಯತ್ನ: ಅಪರಾಧಿಗೆ ಕಠಿಣ ಶಿಕ್ಷೆ

ವಿಜಯಪುರ: ಅಪ್ರಾಪ್ತೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದವನಿಗೆ ಕಠಿಣ ಶಿಕ್ಷೆ ವಿಧಿಸಿ ಪೋಕ್ಸೋ ನ್ಯಾಯಾಲಯ ತೀರ್ಪು ಪ್ರಕಟಿಸಿದೆ.

ಮನಗೂಳಿ ಗ್ರಾಮದ ಶ್ರೀಶೈಲ ಸೋಮಣ್ಣ ಡೋಣೂರ ಶಿಕ್ಷೆಗೆ ಗುರಿಯಾಗಿದ್ದಾನೆ. 2019 ಡಿ.23 ರಂದು ಶಾಲೆಯಿಂದ ಮನೆಗೆ ಹೋಗುತ್ತಿದ್ದ 16 ವರ್ಷದ ಬಾಲಕಿ ಮೇಲೆ ಶ್ರೀಶೈಲ ಅತ್ಯಾಚಾರಕ್ಕೆ ಯತ್ನಿಸಿದ್ದನು. ಅಲ್ಲದೇ, ತನ್ನನ್ನು ಪ್ರೀತಿಸುವಂತೆ ಬಲವಂತ ಮಾಡುತ್ತಿದ್ದನು. ಈ ಬಗ್ಗೆ ಮನಗೂಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ನ್ಯಾಯಾಧೀಶೆ ಸವಿತಾ ಕುಮಾರಿ ಎನ್ ಇವರು ಪ್ರಕರಣದ ವಿಚಾರಣೆ ನಡೆಸಿ ಆರೋಫಿಗೆ 3 ವರ್ಷ ಕಠಿಣ ಶಿಕ್ಷೆ ಹಾಗೂ 5 ಸಾವಿರ ರೂ.ದಂಡ ವಿಧಿಸಿ ತೀರ್ಪು ಪ್ರಕಟಿಸಿದ್ದಾರೆ. ಸರ್ಕಾರದ ಪರವಾಗಿ ವಿ.ಜಿ. ಹಗರಗುಂಡ ವಾದ ಮಂಡಿಸಿದ್ದರು.