ಹನೂರು: ತಾಲೂಕಿನ ರಾಮಾಪುರ ಪೊಲೀಸ್ ಠಾಣಾ ವ್ಯಾಪ್ತಿಯ ಗ್ರಾಮವೊಂದರಲ್ಲಿ ಅಪ್ರಾಪ್ತೆಯ ಮೇಲೆ ವ್ಯಕ್ತಿಯೊಬ್ಬ ಅತ್ಯಾಚಾರವೆಸಗಿದ್ದ ಪರಿಣಾಮ ಆಕೆ ಗರ್ಭಿಣಿಯಾಗಿ ಗರ್ಭಪಾತವಾಗಿರುವುದು ತಡವಾಗಿ ಬೆಳಕಿಗೆ ಬಂದಿದೆ. 10ನೇ ತರಗತಿ ಓದುತ್ತಿರುವ 14 ವರ್ಷದ ಅಪ್ರಾಪ್ತೆಗೆ ಇದೇ ಗ್ರಾಮದ ರಂಗಸ್ವಾಮಿ ಎಂಬಾತ ಇಲ್ಲಸಲ್ಲದ ಆಸೆ ತೋರಿಸಿ ಪ್ರೇಮಿಸಿದ್ದ. ಜತೆಗೆ ದೇಹಸಂಪರ್ಕ ನಡೆಸಿದ್ದ. ಬಾಲಕಿ ಗರ್ಭಿಣಿಯಾಗಿದ್ದಳು. ಆದರೆ ಈ ವಿಷಯ ಮನೆಯವರಿಗೆ ತಿಳಿದಿರಲಿಲ್ಲ. ಅ.21 ರಂದು ಬಾಲಕಿ ಸ್ನಾನ ಮಾಡುತ್ತಿದ್ದಾಗ ವೇಳೆ ಗರ್ಭಪಾತವಾಗಿದ್ದು, ವಿಷಯ ಬೆಳಕಿಗೆ ಬಂದಿದೆ. ಅಪ್ರಾಪ್ತೆಯ ತಾಯಿ ರಾಮಾಪುರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದರು. ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಮಂಗಳವಾರ ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.