ಜಿಲ್ಲೆ

ಅಬಕಾರಿ ಸಚಿವರ ಜಿಲ್ಲಾ ಪ್ರವಾಸ

ಚಿತ್ರದುರ್ಗ: ಅಬಕಾರಿ ಸಚಿವ ಆರ್.ಬಿ.ತಿಮ್ಮಾಪೂರ ಜಿಲ್ಲಾ ಪ್ರವಾಸ ಹಮ್ಮಿಕೊಂಡಿದ್ದು, ಅ. 16ರಂದು ವಿವಿಧ ಮಠಗಳಿಗೆ ಭೇಟಿ ನೀಡಲಿದ್ದಾರೆ. ನಂತರ ಅಬಕಾರಿ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಲಿದ್ದಾರೆ.

17ರ ಬೆಳಗ್ಗೆ 11ಕ್ಕೆ ಜಿಪಂ ಸಭಾಂಗಣದಲ್ಲಿ ಹೊಸಪೇಟೆ ಅಬಕಾರಿ ವಿಭಾಗದ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ. 18ರ ಬೆಳಗ್ಗೆ 11ಕ್ಕೆ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಲಿದ್ದಾರೆ. ಸಂಜೆ 5ರ ನಂತರ ಬೆಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ.