ಬಾಗಲಕೋಟೆ ಜಿಲ್ಲಾ ಪಂಚಾಯಿತಿ ಸಭಾಭವನದಲ್ಲಿ ಬುಧವಾರ ತಾಲೂಕಾ ಪಂಚಾಯಿತಿ ಕಾರ್ಯನಿರ್ವಾಹಕ ಅಽಕಾರಿ ಮತ್ತು ಪಂಚಾಯಿತಿ ಅಭಿವೃದ್ಧಿ ಅಽಕಾರಿಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಬೀಳಗಿ ಶಾಸಕ, ಹಟ್ಟಿ ಚಿನ್ನದ ಗಣಿ ನಿಯಮಿತದ ಅಧ್ಯಕ್ಷ ಜೆ.ಟಿ.ಪಾಟೀಲ ಮಾತನಾಡಿದರು. ಜಿಲ್ಲಾ ಪಂಚಾಯಿತಿ ಸಿಇಒ ಶಶಿಧರ ಕುರೇರ, ಸಿಇಒ ಉಪ ಕಾರ್ಯದರ್ಶಿ ಎನ್.ವೈ.ಬಸರಿಗಿಡದ ಇದ್ದರು.  
ಜಿಲ್ಲೆ

ಅಭಿವೃದ್ದಿ ಕಾರ್ಯಗಳಿಗೆ ೨ ತಿಂಗಳ ಗಡುವು

ಬಾಗಲಕೋಟೆ: ಬೀಳಗಿ ಮತಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ವಿವಿಧ ಅಭಿವೃದ್ದಿ ಕಾರ್ಯಕ್ರಮಗಳು ಕುಂಠಿತಗೊAಡಿದ್ದು, ಬರುವ ಎರಡು ತಿಂಗಳಲ್ಲಿ ಅಭಿವೃದ್ಧಿ ಕಾರ್ಯಗಳಲ್ಲಿ ಪ್ರಗತಿ ಹೊಂದಬೇಕು ಎಂದು ಬೀಳಗಿ ಶಾಸಕ, ಹಟ್ಟಿ ಚಿನ್ನದ ಗಣಿ ನಿಯಮಿತದ ಅಧ್ಯಕ್ಷ ಜೆ.ಟಿ.ಪಾಟೀಲ ಅಽಕಾರಿಗಳಿಗೆ ಗಡುವು ನೀಡಿದರು.

ಜಿಲ್ಲಾ ಪಂಚಾಯಿತಿ ಸಭಾಭವನದಲ್ಲಿ ಬುಧವಾರ ತಾಲೂಕಾ ಪಂಚಾಯಿತಿ ಕಾರ್ಯನಿರ್ವಾಹಕ ಅಽಕಾರಿ ಮತ್ತು ಪಂಚಾಯಿತಿ ಅಭಿವೃದ್ಧಿ ಅಽಕಾರಿಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಗ್ರಾಮ ಮಟ್ಟದಲ್ಲಿ ಮೂಲಭೂತ ಸೌಲಭ್ಯಗಳಾದ ಚರಂಡಿ ಕಾಮಗಾರಿ, ಶುದ್ದ ಕುಡಿಯುವ ನೀರು ಸೇರಿದಂತೆ ಇತರೆ ಕೆಲಸಗಳು ಸರಿಯಾಗಿ ಆಗುತ್ತಿಲ್ಲ. ಮಾಹಿತಿ ಕೇಳಿದರೆ ಸರಿಯಾದ ಮಾಹಿತಿ ಸಹ ನೀಡುತ್ತಿಲ್ಲ. ಅಽಕಾರಿಗಳು ತಮ್ಮ ಕಾರ್ಯ ವೈಖರಿಯಲ್ಲಿ ಬದಲಾವಣೆಯಾಗದಿದ್ದಲ್ಲಿ ನಿಮ್ಮ ಮೇಲೆ ಸರ್ಕಾರಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಲಾಗುವುದು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.

ಮತಕ್ಷೇತ್ರದ ಬಾದಾಮಿ ತಾಲೂಕಿನ ಫಕೀರ ಬೂದಿಹಾಳ ಹಾಗೂ ಅನಗವಾಡಿ ಪಂಚಾಯಿತಿ ಅಭಿವೃದ್ಧಿ ಅಽಕಾರಿಗಳಿಗೆ ಸಾಕಷ್ಟು ಬಾರಿ ಹೇಳಿದರು, ಸಮರ್ಪಕವಾಗಿ ಕಾರ್ಯನಿರ್ವಹಿಸದ ಕಾರಣ ನೋಟಿಸ್ ಜಾರಿ ಮಾಡುವಂತೆ ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಽಕಾರಿಗಳಿಗೆ ಸೂಚಿಸಿದ ಅವರು, ತಾಲೂಕಾ ಕಾರ್ಯನಿರ್ವಾಹಕ ಅಽಕಾರಿಗಳಿಗೆ ಪ್ರತಿ ಗ್ರಾಮಗಳಿಗೆ ವಾರಕ್ಕೆ ಒಂದು ಬಾರಿಯಾದರೂ ಭೇಟಿ ನೀಡಿ ಅವರ ಕಾರ್ಯ ವೈಖರಿ ಪರಿಶೀಲಿಸಬೇಕು. ಗ್ರಾಮದ ಜನರ ಜೊತೆಗೆ ಮುಕ್ತವಾಗಿ ಚರ್ಚೆ ಮಾಡಿ ಗ್ರಾಮದ ಸಮಸ್ಯೆಗಳ ಪರಿಹರಿಸುವ ಕಾರ್ಯವಾಗಬೇಕು ಎಂದರು.

ಮತಕ್ಷೇತ್ರದ ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸಿಸಿ ರಸ್ತೆ, ಕುಡಿಯುವ ನೀರು, ಶೌಚಗೃಹಗಳ ಕುಂದು ಕೊರತೆಗಳು ನಮ್ಮ ಗಮನಕ್ಕೆ ಬರದಂತೆ ಕಾರ್ಯನಿರ್ವಹಿಸಬೇಕು. ಪ್ರತಿ ಪ್ರಾಥಮಿಕ ಶಾಲೆಯ ಅಡುಗೆ ಕೋಣೆ ರೀಪೇರಿ, ಅಂಗನವಾಡಿ ಕಟ್ಟಡ ಹಾಗೂ ಸ್ಮಶಾನದ ಚಿತಾಗಾರ ದುರಸ್ತಿ ಕಾರ್ಯ ಇದ್ದಲ್ಲಿ ಕೂಡಲೇ ಸರಿಪಡಿಸಬೇಕು. ಮತಕ್ಷೇತ್ರದ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯಿಂದ ಸರಿಯಾದ ಕೆಲಸ ನಡೆಯುತ್ತಿಲ್ಲ. ನೆಟ್ಟ ಗಿಡಗಳು ಕಾಣುತ್ತಿಲ್ಲ. ಈ ಬಗ್ಗೆ ಅಽಕಾರಿಗಳು ಹೆಚ್ಚಿನ ಗಮನ ಹರಿಸಿ ಮತಕ್ಷೇತ್ರದಲ್ಲಿ ಹಸರಿಕರಣಗೊಳಿಸಲು ಕ್ರಮ ಕೈಗೊಳ್ಳಲು ಸೂಚಿಸಿದರು. ಕ್ಷೇತ್ರ ವ್ಯಾಪ್ತಿಯ ಗ್ರಾ.ಪಂ ವತಿಯಿಂದ ಕನಿಷ್ಠ ೧೦೦ ರೈತರಿಗೆ ಸರ್ಕಾರಿ ಯೋಜನೆಗಳನ್ನು ಪೂರೈಸಿಕೊಟ್ಟಲ್ಲಿ ೧೦ ಸಾವಿರ ರೂ.ಗಳ ಬಹುಮಾನ ಘೋಷಿಸಿದ್ದೆ. ಆ ಬಹುಮಾನ ಪಡೆಯಲು ಯಾರಿಂದಲು ಆಗಿಲ್ಲ ಎನ್ನುವುದು ನೋವಿನ ಸಂಗತಿ ಕಳವಳ ವ್ಯಕ್ತಪಡಿಸಿದರು.

ಜಿಲ್ಲಾ ಮುಖ್ಯ ಕಾರ್ಯನಿರ್ವಾಹಕ ಅಽಕಾರಿ ಶಶಿಧರ ಕುರೇರ ಮಾತನಾಡಿ, ಪಂಚಾಯಿತಿ ಅಭಿವೃದ್ಧಿ ಅಽಕಾರಿಗಳು ನರೇಗಾದಡಿ ಕೈಗೊಂಡು ಹಳೆಯ ಕಾಮಗಾರಿಗಳನ್ನು ಎರಡು ದಿನಗಳಲ್ಲಿ ಪಟ್ಟಿಮಾಡಿಕೊಂಡು ಇಡಬೇಕು. ಅವುಗಳಿಗೆ ಆನ್‌ಲೈನ್‌ನಲ್ಲಿ ಅನುಮೋದನೆಗೆ ಕ್ರಮವಹಿಸಲಾಗುತ್ತದೆ. ಕ್ರಿಯಾಯೋಜನೆಯಲ್ಲಿ ಕೈಗೊಂಡ ಕಾಮಗಾರಿಗಳಿಗೆ ವಿಳಂಬ ದೋರಣೆ ಅನುಸರಿಸುವಂತಿಲ್ಲ. ಕಾರ್ಯ ವೈಖರಿಯಲ್ಲಿ ಬೇಜವಾಬ್ದಾರಿ ತೋರಿದಲ್ಲಿ ಅಮಾನತ್ತಿಗೆ, ಶಿ-Áರಸ್ಸು ಮಾಡಲಾಗುವುದು. ಕುಡಿಯುವ ನೀರು ಪೂರೈಕೆ ನಿರ್ವಹಣೆ ವ್ಯವಸ್ಥಿತವಾಗಿರಬೇಕು. ೧೫ನೇ ಹಣಕಾಸಿನ ಯೋಜ ಅಡಿ ಕೈಗೊಂಡ ಕಾಮಗಾರಿಗಳು ಅಪೂರ್ಣಗೊಂಡಿದ್ದು, ಪೂರ್ಣಗೊಳಿಸಲು ಸೂಚಿಸಿದರು. ಇ-ಖಾತಾ ಬಗ್ಗೆ ಜನರಲ್ಲಿ ಅರಿವು ಮೂಡಿಸಿ ನಿಗದಿತ ಅವಽಯಲ್ಲಿ ಕೆಲಸ ಮಾಡಿಕೊಡಲು ನಿರ್ದೇಶನ ನೀಡಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಎನ್.ವೈ.ಬಸರಿಗಿಡದ, ತಾಲೂಕಾ ಪಂಚಾಯಿತಿ ಕಾರ್ಯನಿರ್ವಾಹಕ ಅಽಕಾರಿಗಳಾದ ಸುಭಾಷ ಸಂಪಗಾವಿ, ಶ್ರೀನಿವಾಸ ಪಾಟೀಲ, ಸತೀಶ ಮಾಕೊಂಡ ಸೇರಿದಂತೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಽಕಾರಿಗಳು ಉಪಸ್ಥಿತರಿದ್ದರು.