ಚಿಕ್ಕಮಗಳೂರು ತಾಲೂಕಿನ ಹಿರೇಗೌಜ ಗ್ರಾಪಂ ವ್ಯಾಪ್ತಿಯಲ್ಲಿ ಸುಮಾರು ೬೦ ಲಕ್ಷ ರೂ. ವೆಚ್ಚದಲ್ಲಿ ಚಿಕ್ಕಗೌಜದಿಂದ ಹಿರೇಗೌಜದವರೆಗೆ ಕಾಂಕ್ರೀಟ್ ರಸ್ತೆ ನಿರ್ಮಾಣ ಕಾರ್ಯಕ್ಕೆ ಶಾಸಕ ಎಚ್.ಡಿ.ತಮ್ಮಯ್ಯ ಗುದ್ದಲಿ ಪೂಜೆ ನೆರವೇರಿಸಿದರು. ರೇಖಾ ಹುಲಿಯಪ್ಪ ಗೌಡ, ಬಿ.ಎಚ್.ಹರೀಶ್, ಮಂಜುಳಾ, ಹಿರೇಗೌಜ ಶಿವಕುಮಾರ್ ಮತ್ತಿತರರಿದ್ದರು. 
ಜಿಲ್ಲೆ

ಅಭಿವೃದ್ಧಿ ಕಾರ್ಯ ಕೈಗೊಳ್ಳುವಂತೆ ಸಿಎಂ ಸೂಚನೆ

ಚಿಕ್ಕಮಗಳೂರು: ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ೨೫ ಕೋಟಿ ರೂ. ಮಂಜೂರು ಮಾಡುವ ಮೂಲಕ ಅಭಿವೃದ್ಧಿ ಕಾರ್ಯ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ ಎಂದು ಶಾಸಕ ಎಚ್.ಡಿ.ತಮ್ಮಯ್ಯ ತಿಳಿಸಿದರು.

ತಾಲೂಕಿನ ಹಿರೇಗೌಜ ಗ್ರಾಪಂ ವ್ಯಾಪ್ತಿಯಲ್ಲಿ ಸುಮಾರು ೬೦ ಲಕ್ಷ ರೂ. ವೆಚ್ಚದಲ್ಲಿ ಚಿಕ್ಕಗೌಜದಿಂದ ಹಿರೇಗೌಜದವರೆಗೆ ಕಾಂಕ್ರೀಟ್ ರಸ್ತೆ ನಿರ್ಮಾಣ ಕಾರ್ಯಕ್ಕೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಈ ವಿಶೇಷ ಅನುದಾನದಲ್ಲಿ ಚಿಕ್ಕಮಗಳೂರು ತಾಲೂಕಿನ ೩೪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಳ್ಳಿಗಳ ರಸ್ತೆಗಳನ್ನು ಅಭಿವೃದ್ಧಿಪಡಿಸಲು ೧೫ ಕೋಟಿ ರೂ. ಬಳಕೆ ಮಾಡಲಾಗಿದೆ. ಸಮುದಾಯ ಮತ್ತು ದೇವಾಲಯಗಳ ಅಭಿವೃದ್ಧಿಗೆ ೭ ಕೋಟಿ ರೂ. ಹಾಗೂ ೩ ಕೋಟಿ ರೂ. ವೆಚ್ಚದಲ್ಲಿ ನೀರಾವರಿ ಯೋಜನೆಗಳ ಅನುಷ್ಠಾನಕ್ಕೆ ವಿನಿಯೋಗಿಸಲಾಗಿದೆ ಎಂದು ಹೇಳಿದರು.

ಚಿಕ್ಕಗೌಜ ಮತ್ತು ಹಿರೇಗೌಜ ಮಧ್ಯೆ ರಸ್ತೆ ಹಾಳಾಗಿದ್ದು, ಅಭಿವೃದ್ಧಿಪಡಿಸಬೇಕೆಂಬ ಜನರ ಬಹಳ ದಿನಗಳ ಬೇಡಿಕೆಗೆ ಅನುಗುಣವಾಗಿ ಇಂದು ಗುದ್ದಲಿ ಪೂಜೆ ನೆರವೇರಿಸಲಾಗಿದೆ. ಲಕ್ಯಾದಿಂದ ಕಡೂರು ಮಾರ್ಗವಾಗಿ ಹೋಗುವವರಿಗೆ ಮತ್ತು ಸುತ್ತಮುತ್ತಲ ಎಂಟು-ಹತ್ತು ಹಳ್ಳಿಯ ಗ್ರಾಮಸ್ಥರಿಗೆ ಮತ್ತು ರೈತರಿಗೆ ಇದರಿಂದ ಅನುಕೂಲವಾಗಲಿದೆ ಎಂದರು.

ಪAಚ ಗ್ಯಾರಂಟಿ ಅನುಷ್ಠಾನದಿಂದಾಗಿ ಸರ್ಕಾರದಲ್ಲಿ ಅಭಿವೃದ್ಧಿಗೆ ಹಣವಿಲ್ಲವೆಂಬ ವಿಪಕ್ಷದವರ ಆರೋಪಕ್ಕೆ ವಿವಿಧ ಅಭಿವೃದ್ಧಿ ಯೋ ಜನೆಗಳಿಗೆ ವಿಶೇಷ ಅನುದಾನ ಬಿಡುಗಡೆ ಮಾಡಿ, ಈಗಾಗಲೇ ಕಾಮಗಾರಿಗಳು ಆರಂಭಿಸಿ ಉತ್ತರ ನೀಡಿz್ದೆÃವೆ ಎಂದು ಹೇಳಿದರು.

ಮುಖ್ಯಮಂತ್ರಿಗಳ ಅಭಿವೃದ್ಧಿ ಕಾರ್ಯಗಳನ್ನು ಸಹಿಸದ ಕೆಲವರು ಅಪಪ್ರಚಾರ ಮಾಡುತ್ತಿದ್ದಾರೆ. ಬಡವರು ಮತ್ತು ಶೋಷಿತರ ಪರವಾಗಿ ಕೆಲಸ ಮಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮುಂದಿನ ದಿನಗಳಲ್ಲಿ ಕ್ಷೇತ್ರದ ನೀರಾವರಿ ಯೋಜನೆಗಳಿಗೆ ಹಣ ಮಂಜೂರು ಮಾಡುವುದಾಗಿ ಭರವಸೆ ನೀಡಿದ್ದಾರೆ ಎಂದರು.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಜಿಪಂ ಮಾಜಿ ಅಧ್ಯಕ್ಷೆ ರೇಖಾಹುಲಿಯಪ್ಪಗೌಡ ಮಾತನಾಡಿ, ಶಾಸಕರ ವಿಶೇಷ ಅನುದಾನದಿಂದ ಹೆಚ್ಚಿನ ಅಭಿವೃದ್ಧಿ ಮಾಡುತ್ತೇವೆ. ಗುಣಮಟ್ಟದ ಕಾಮಗಾರಿಗಳನ್ನು ಶೀಘ್ರ ಮುಕ್ತಾಯಗೊಳಿಸುವ ವಿಶ್ವಾಸವಿದೆ ಎಂದು ಹೇಳಿದರು.

ಚಿಕ್ಕಗೌಜದಿಂದ ಹಿರೇಗೌಜಕ್ಕೆ ಹೋಗುವ ರಸ್ತೆ ಅಭಿವೃದ್ಧಿಗೆ ಚುನಾವಣಾ ಪೂರ್ವದಿಂದಲೂ ಬೇಡಿಕೆ ಇತ್ತು. ಇಂದು ಕಾಂಕ್ರೀಟ್ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿರುವುದು ಸಂತಸ ತಂದಿದೆ ಎಂದರು.

ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಿಂದ ಪ್ರತೀ ಮನೆಯ ಸದಸ್ಯರು ನೆಮ್ಮದಿಯಿಂದ ಜೀವನ ನಡೆಸುತ್ತಿದ್ದಾರೆ. ಈ ಬಾರಿ ಮಳೆ ಚೆನ್ನಾಗಿ ಬಂದಿರುವುದರಿAದ ರೈತರ ಮೊಗದಲ್ಲಿ ಮಂದಹಾಸ ಬೀರಿ ತುಂಬಾ ಸಮೃದ್ಧ ಜೀವನ ನಡೆಸುತ್ತಿದ್ದಾರೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಗ್ರಾಪಂ ಅಧ್ಯಕ್ಷೆ ಮಂಜುಳ, ಸದಸ್ಯ ಸುರೇಶ್, ಕೃಷಿ ಉತ್ಪನ್ನಗಳ ಸಂಸ್ಕರಣೆ ನಿಗಮದ ಅಧ್ಯಕ್ಷ ಬಿ.ಎಚ್ ಹರೀಶ್, ಗ್ರಾಪಂ ಸದಸ್ಯ ಹಿರೇಗೌಜ ಶಿವಕುಮಾರ್ ಮತ್ತಿತರರಿದ್ದರು.