ಕಂಪಲಾಪುರದಲ್ಲಿ ಶನಿವಾರ ಆಯೋಜಿಸಿದ್ದ ಜೆಡಿಎಸ್ ಕಾರ್ಯಕರ್ತರ ಸಭೆಯನ್ನು ಶಾಸಕ ಕೆ.ಮಹದೇವ್ ಉದ್ಘಾಟಿಸಿದರು. ಪಿ.ಎಂ.ಪ್ರಸನ್ನ, ಮಹೇಶ್, ಎಂ.ಪಿ.ಚಂದ್ರೇಶ್, ಹೇಮಂತ್ ಕುಮಾರ್ ಇತರರು ಇದ್ದರು.  
ಜಿಲ್ಲೆ

ಅಭಿವೃದ್ಧಿ ಸಹಿಸದೆ ಅಪಪ್ರಚಾರ

ಕಂಪಲಾಪುರ: ನನ್ನ ಅಭಿವೃದ್ಧಿ ಕೆಲಸವನ್ನು ಸಹಿಸದೆ ಅಪಪ್ರಚಾರ ಮಾಡಲಾಗುತ್ತಿದೆ ಎಂದು ಶಾಸಕ ಕೆ.ಮಹದೇವ್ ವಾಗ್ದಾಳಿ ನಡೆಸಿದರು.

ಇಲ್ಲಿನ ಎಪಿಎಂಸಿ ಮಾರುಕಟ್ಟೆ ಆವರಣದಲ್ಲಿ ಶನಿವಾರ ಆಯೋಜಿಸಿದ್ದ ಜೆಡಿಎಸ್ ಕಾರ್ಯಕರ್ತರ ಸಮಾವೇಶ ಉದ್ಘಾಟಿಸಿ ಮಾತನಾಡಿ, 30 ವರ್ಷ ಅಧಿಕಾರದಲ್ಲಿದ್ದು ಏನು ಮಾಡಿದ್ದೀರಿ ಎಂಬುದು ಜನತೆಗೆ ಗೊತ್ತಿದೆ. ಆದರೂ ನನ್ನ ವಿರುದ್ಧ ಅಪಪ್ರಚಾರ ಮಾಡಿ ಚಪ್ಪಾಳೆ ಗಿಟ್ಟಿಸಿಕೊಳ್ಳುತ್ತಿದ್ದಾರೆ ಎಂದು ಮಾಜಿ ಶಾಸಕರ ವಿರುದ್ಧ ಕಿಡಿಕಾರಿದರು.

ಮೈಮುಲ್ ಅಧ್ಯಕ್ಷ ಪಿ.ಎಂ.ಪ್ರಸನ್ನ, ಪಿರಿಯಾಪಟ್ಟಣ ಪುರಸಭೆ ಅಧ್ಯಕ್ಷ ಮಹೇಶ್, ಜಿಪಂ ಮಾಜಿ ಸದಸ್ಯ ಎಂ.ಪಿ.ಚಂದ್ರೇಶ್, ಹೇಮಂತ್ ಕುಮಾರ್, ಟಿಎಪಿಸಿಎಂಎಸ್ ಅಧ್ಯಕ್ಷ ನಾಗೇಂದ್ರ, ನಿರ್ದೇಶಕರಾದ ಕುಮಾರ್, ಐಲಾಪುರ ರಾಮು, ಡೇರಿ ಅಧ್ಯಕ್ಷ ಕೃಷ್ಣೇಗೌಡ, ಲಕ್ಷ್ಮ್ಮಣ್, ಸಹಕಾರ ಸಂಘದ ಅಧ್ಯಕ್ಷ ಕಟ್ಟೆ ಜಯಣ್ಣ, ಜಿಲ್ಲಾ ಸಹಕಾರ ಬ್ಯಾಂಕ್ ನಿರ್ದೇಶಕ ಸಿ.ಎನ್.ರವಿ, ರಘುನಾಥ್, ಜೆಡಿಎಸ್ ತಾಲೂಕು ಅಧ್ಯಕ್ಷ ಅಣ್ಣಯ್ಯಶೆಟ್ಟಿ , ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಪ್ರೀತಿ ಅರಸ್, ಉಪಾಧ್ಯಕ್ಷೆ ಸುನೀತಾ ಮಂಜು ಇತರರಿದ್ದರು.