ಮೂಡಿಗೆರೆ ತಾಲೂಕಿನ ಬಿ.ಹೊಸಳ್ಳಿ ಗ್ರಾಮದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕಿ ನಯನಾ ಮೋಟಮ್ಮ ಗುದ್ದಲಿಪೂಜೆ ನೆರವೇರಿಸಿದರು. ಗ್ರಾಪಂ ಅಧ್ಯಕ್ಷ ಆಶ್ರಿತ್, ಸುಬ್ರಹ್ಮಣ್ಯ, ವಿನಯ್, ಜಗನ್ನಾಥ್, ಶ್ರೀನಾಥ್, ಮಹೇಶ್ ಇತರರಿದ್ದರು. 
ಜಿಲ್ಲೆ

ಅಭಿವೃದ್ಧಿಗೆ ಅನುದಾನ ಲಭ್ಯ

ಮೂಡಿಗೆರೆ: ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಅಭಿವೃದ್ಧಿ ಮಾಡಲಾಗುತ್ತಿದೆ. ಮೂಡಿಗೆರೆ ವಿಧಾನಸಭಾ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಅನುದಾನದ ಕೊರತೆ ಇಲ್ಲ. ಎಲ್ಲ ಕಡೆ ಗುಣಮಟ್ಟದ ಕಾಮಗಾರಿ ನಡೆಯುತ್ತಿದೆ ಎಂದು ಶಾಸಕಿ ನಯನಾ ಮೋಟಮ್ಮ ಹೇಳಿದರು.

5 ಕೋಟಿ ರೂ. ಅನುದಾನದಲ್ಲಿ ಮತ್ತಿಕಟ್ಟೆ-ಬಿ.ಹೊಸಳ್ಳಿ ಸೇರಿದಂತೆ ವಿವಿಧ ರಸ್ತೆಗಳ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು, ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ಅಭಿವೃದ್ಧಿ ಕಾರ್ಯಗಳಿಗೆ ಹಿನ್ನಡೆಯಾಗಿದೆ ಎಂಬ ವಿಪಕ್ಷಗಳ ಆರೋಪದಲ್ಲಿ ಹುರುಳಿಲ್ಲ. ಕ್ಷೇತ್ರದಲ್ಲಿ ರಸ್ತೆ ಸೇರಿದಂತೆ ವಿವಿಧ ರೀತಿಯ ಅಭಿವೃದ್ಧಿಗಳ ಕಾರ್ಯ ನಡೆೆಯುತ್ತಿದೆ. ಮತ್ತಿಕಟ್ಟೆ-ಬಿ.ಹೊಸಳ್ಳಿ ರಸ್ತೆ ಅಭಿವೃದ್ಧಿ ಪಡಿಸುವಂತೆ ಗ್ರಾಮಸ್ಥರು ಬೇಡಿಕೆ ಇಟ್ಟಿದ್ದರು. ಆದ್ಯತೆ ಮೇರೆಗೆ ಎಲ್ಲ ರಸ್ತೆಗಳನ್ನು ಅಭಿವೃದ್ಧಿಗೊಳಿಸಲಾಗುವುದು ಎಂದು ತಿಳಿಸಿದರು.

ಬಿ.ಹೊಸಳ್ಳಿ ಗ್ರಾಪಂ ಅಧ್ಯಕ್ಷ ಆಶ್ರಿತ್ ಮಾತನಾಡಿ, ರಸ್ತೆ ಅಭಿವೃದ್ಧಿಗಾಗಿ ಗ್ರಾಪಂನಿಂದ ಶಾಸಕರು ಹಾಗೂ ಚಿತ್ರಕಲಾ ಪರಿಷತ್ ಅಧ್ಯಕ್ಷ ಬಿ.ಎಲ್.ಶಂಕರ್ ಅವರಿಗೆ ಮನವಿ ಸಲ್ಲಿಸಲಾಗಿತ್ತು. ರಸ್ತೆಗಳು ಗುಂಡಿಯಾಗಿ ವಾಹನಗಳು ಸಂಚರಿಸಲು ಕಷ್ಟಕರವಾಗಿದೆ. ವಿದ್ಯಾರ್ಥಿಗಳು ಶಾಲೆ ಕಾಲೇಜಿಗೆ ತೆರಳಲು ಹರಸಾಹಸ ಪಡಬೇಕಾಗಿದೆ. ರಸ್ತೆ ಅಭಿವೃದ್ಧಿಯಿಂದ ವಿಭಾಗದ ಜನರಿಗೆ ವರದಾನವಾಗಿದೆ ಎಂದು ತಿಳಿಸಿದರು.

ಬಣಕಲ್ ಹೋಬಳಿ ಕಾಂಗ್ರೆಸ್ ಅಧ್ಯಕ್ಷ ಸುಬ್ರಹ್ಮಣ್ಯ, ಗುತ್ತಿಗೆದಾರ ಪ್ರದೀಪ್, ಮುಖಂಡರಾದ ವಿನಯ್, ಜಗನ್ನಾಥ್, ಶ್ರೀನಾಥ್, ಮಹೇಶ್, ಆದರ್ಶ, ಶಶಿಧರ್, ಅರುಣ, ಪಾಪಣ್ಣ, ಅಶ್ವತ್ಥ್ ಆಚಾರ್ ಇತರರಿದ್ದರು.