ಜಿಲ್ಲೆ

ಅಭಿವೃದ್ಧಿಯೇ ಬಿಜೆಪಿ ಮೂಲಮಂತ್ರ

ಯಾದಗಿರಿ: ರಾಜ್ಯ ಹಾಗೂ ಕೇಂದ್ರದಲ್ಲಿನ ಡಬ್ಬಲ್ ಇಂಜಿನ್ ಸಕರ್ಾರ ದೇಶದ ಶ್ರೀಸಾಮಾನ್ಯನಿಗೆ ಒಳಿತಾಗುವ ನೂರಾರು ಯೋಜನೆಗಳನ್ನು ಜಾರಿಗೆ ತರುವ ಮೂಲಕ ಸಮರ್ಥವಾಗಿ ಅನುಷ್ಠಾನಕ್ಕೆ ತಂದಿದೆ ಎಂದು ಕೇಂದ್ರ ನವೀಕರಿಸಬಹುದಾದ ಇಂಧನ, ರಾಸಾಯನಿಕ ಹಾಗೂ ರಸಗೊಬ್ಬರಗಳ ಖಾತೆಯ ಕೇಂದ್ರ ಸಚಿವ ಭಗವಂತ ಖೂಬಾ ತಿಳಿಸಿದರು.

ಮಂಗಳವಾರ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಪಂ ಸಹಯೋಗದಲ್ಲಿ ಆಯೋಜಿಸಿದ್ದ ಸಕರ್ಾರದ ವಿವಿಧ ಯೋಜನೆಗಳಡಿ ಸೌಲಭ್ಯ ಪಡೆದ ಫಲಾನುಭವಿಗಳ ಸಮ್ಮೇಳನ ಉದ್ಘಾಟಿಸಿ ಮಾತನಾಡಿ, ಬಿಜೆಪಿ ಪಕ್ಷ ಕೇವಲ ಭರವಸೆ ನೀಡಿ, ಆಡಳಿತ ನಡೆಸಿಲ್ಲ. ಸಮಾಜದ ಎಲ್ಲ ವರ್ಗಗಳ ಹಿತ ಕಾಪಾಡುವ ಸಕರ್ಾರವಾಗಿದೆ ಎಂದು ಪ್ರತಿಪಾದಿಸಿದರು. ಅಭಿವೃದ್ಧಿಯೇ ನಮ್ಮ ಸಕರ್ಾರದ ಮೂಲಮಂತ್ರವಾಗಿದ್ದು, ರಾಜ್ಯದಲ್ಲಿ ಮತ್ತೊಮ್ಮೆ ನಮ್ಮ ಸಕರ್ಾರ ಅಕಾರಕ್ಕೆ ಬರುವುದು ಶತಸಿದ್ಧ ಎಂದು ವಿಶ್ವಾಸ ವ್ಯಕ್ತಪಡಿಸಿದ ಖೂಬಾ, ಜಿಲ್ಲೆಯಲ್ಲಿ ಒಟ್ಟು 11.74 ಲಕ್ಷ ಜನಸಂಖ್ಯೆ ಇದೆ. ಇದರಲ್ಲಿ 6.50 ಲಕ್ಷ ವಿವಿಧ ಯೋಜನೆಗಳಡಿ ಫಲಾನುಭವಿಗಳಿದ್ದಾರೆ. ಮಹಿಳೆಯರು, ಮಕ್ಕಳು, ಹಿರಿಯ ನಾಗರಿಕ , ದಲಿತರು, ಹಿಂದುಳಿದ ವರ್ಗದವರು ಮತ್ತು ಅಲ್ಪಸಂಖ್ಯಾತರ ಎಲ್ಲ ವರ್ಗದವರನ್ನು ಗಮನದಲ್ಲಿಟ್ಟುಕೊಂಡು ಹಲವು ಕಾರ್ಯಕ್ರಮಗಳನ್ನು ರೂಪಿಸಿ, ಅವರ ಮನೆ ಬಾಗಿಲಿಗೆ ಯೋಜನೆಗಳನ್ನು ತೆಗೆದುಕೊಂಡು ಸೌಲಭ್ಯಗಳನ್ನು ಒದಗಿಸಲಾಗಿದೆ ಎಂದು ವಿವರಿಸಿದರು.

ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ್ ಮಾತನಾಡಿ, ಕೃಷಿ, ಶಿಕ್ಷಣ,ನೀರಾವರಿ, ಗ್ರಾಮೀಣಾಭಿವೃದ್ಧಿ, ಲೋಕೋಪಯೋಗಿ, ಸಮಾಜ ಕಲ್ಯಾಣ ಇಲಾಖೆ ಸೇರಿದಂತೆ ಹಲವು ಯೋಜನೆಗಳ ಅಡಿಯಲ್ಲಿ ಕೇಂದ್ರ ಮತ್ತು ರಾಜ್ಯ ಸಕರ್ಾರಗಳು ನೂರಾರು ಕಾರ್ಯಕ್ರಮಗಳ ಮೂಲಕ ಸೌಲಭ್ಯ ಕಲ್ಪಿಸಲಾಗಿದೆ. ದೇಶ ಮತ್ತು ರಾಜ್ಯದ ಅಭಿವೃದ್ಧಿಗೆ ಗಮನ ನೀಡಲಾಗಿದೆ. ಶ್ರಮಶಕ್ತಿ, ಯುವಶಕ್ತಿ, ಕಿಸಾನ್ ಸಮ್ಮಾನ್ ಯೋಜನೆ, ಹಕ್ಕು ಪತ್ರ ವಿತರಣೆ, ಕಂದಾಯ ಗ್ರಾಮ,ಭಾಗ್ಯಲಕ್ಷ್ಮಿ, ಸಕಾಲ ಹೀಗೆ ಹಲವು ಯೋಜನೆಗಳ ಅಡಿಯಲ್ಲಿ ಡಿಬಿಟಿ ಮೂಲಕ ನೇರವಾಗಿ ಫಲಾನುಭವಿಗಳಿಗೆ ಹಣ ಬಿಡುಗಡೆ ಮಾಡಲಾಗಿದೆ ಎಂದರು.

ರಾಯಚೂರು ಸಂಸದ ರಾಜಾ ಅಮರೇಶ್ವರ್ ನಾಯಕ್ ಮಾತನಾಡಿ, ಫಲಾನುಭವಿಗಳಿಗೆ ಯೋಜನೆಯ ಲಾಭ ನೇರವಾಗಿ ಮುಟ್ಟಬೇಕು ಆಗ ಮಾತ್ರ ಯೋಜನೆ ಸಾರ್ಥಕವಾಗುತ್ತದೆ ಎಂಬ ಉದ್ದೇಶದಿಂದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಗರಿಬ್ ಕಲ್ಯಾಣ ಯೋಜನೆಯಡಿ ಉಚಿತ 5 ಕೆಜಿ ಅಕ್ಕಿ, ಕಡಿಮೆ ಬೆಲೆಯ ಔಷಗಾಗಿ ಜನಔಷದಿ ಕೇಂದ್ರ, ಈ ಭಾಗದ ರೈತರಿಗೆ ಅನುಕೂಲವಾಗಲು ಸ್ಕಾಡಾ ಯೋಜನೆ ಜಾರಿಗೆ ತಂದಿದ್ದಾರೆ ಎಂದು ಹೇಳಿದರು.

ಶಾಸಕ ವೆಂಕಟರೆಡ್ಡಿ ಮುದ್ನಾಳ್, ನಾನು ಅಕಾರ ವಹಿಸಿಕೊಂಡ ನಂತರ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡಿದ್ದೇನೆ. ಶಿಕ್ಷಣ, ಆರೋಗ್ಯ ಹಾಗೂ ಮೂಲಸೌಲಭ್ಯ ಕಲ್ಪಿಸಲು ಒತ್ತು ನೀಡಿರುವೆ ಎಂದರು.

ಶಾಸಕ ನರಸಿಂಹ ನಾಯಕ (ರಾಜುಗೌಡ) ಪ್ರಾಸ್ತಾವಿಕವಾಗಿ ಮಾತನಾಡಿ, ಜಲಧಾರೆ ಯೋಜನೆ ದೇಶದಲ್ಲೇ ಮೊದಲ ಬಾರಿಗೆ ನಮ್ಮ ಜಿಲ್ಲೆಗೆ ಪರಿಚಯಿಸಲಾಗಿದೆ. ಉಜ್ವಲ ಯೋಜನೆಯ ಅಡುಗೆ ಅನಿಲ, ಮನೆ ಮನೆಗೆ ಶೌಚಗೃಹ ನಿಮರ್ಿಸಿದ ನಿಮಿತ್ಯ ಗೌರವ ಮತ್ತು ಸುರಕ್ಷಿತವಾಗಿ ಮಹಿಳೆಯರ ಬದುಕು ಕಟ್ಟಿಕೊಂಡಿದ್ದಾರೆ. ನೀರಾವರಿಗೆ ವಿಶೇಷ ಗಮನ ನೀಡಿದೆ. ಬಡವರ ಮನೆ ಬಾಗಿಲಿಗೆ ಸೌಲಭ್ಯ ಕಲ್ಪಿಸಲಾಗಿದೆ ಎಂದು ತಿಳಿಸಿದರು.

ಅಂಬಿಗರ ಚೌಡಯ್ಯ ನಿಗಮದ ಅಧ್ಯಕ್ಷ ಬಾಬುರಾವ್ ಚಿಂಚನಸೂರ, ಅಲೆಮಾರಿ ದೇವೆಂದ್ರನಾಥ ನಾದ್, ಯುಡಾ ರುದ್ರಗೌಡ ಪಾಟೀಲ್, ನಗರಸಭೆ ಅಧ್ಯಕ್ಷ ಸುರೇಶ ಅಂಬಿಗೇರ, ಜಿಲ್ಲಾಕಾರಿ ಸ್ನೇಹಲ್ ಆರ್., ಜಿಪಂ ಸಿಇಒ ಅಮರೇಶ ಆರ್. ನಾಯ್ಕ, ಜಿಲ್ಲಾ ಪೊಲೀಸ್ ವರಿಷ್ಠಾಕಾರಿ ಡಾ.ಸಿ.ಬಿ.ವೇದಮೂತರ್ಿ, ಅಪರ ಜಿಲ್ಲಾಕಾರಿ ಶರಣಬಸಪ್ಪ ಕೋಟೆಪ್ಪಗೊಳ, ಸಹಾಯಕ ಆಯುಕ್ತ ಶಾ ಆಲಂ ಹುಸೇನ್ ಇದ್ದರು.

xಯಾದಗಿರಿ: ರಾಜ್ಯ ಹಾಗೂ ಕೇಂದ್ರದಲ್ಲಿನ ಡಬ್ಬಲ್ ಇಂಜಿನ್ ಸಕರ್ಾರ ದೇಶದ ಶ್ರೀಸಾಮಾನ್ಯನಿಗೆ ಒಳಿತಾಗುವ ನೂರಾರು ಯೋಜನೆಗಳನ್ನು ಜಾರಿಗೆ ತರುವ ಮೂಲಕ ಸಮರ್ಥವಾಗಿ ಅನುಷ್ಠಾನಕ್ಕೆ ತಂದಿದೆ ಎಂದು ಕೇಂದ್ರ ನವೀಕರಿಸಬಹುದಾದ ಇಂಧನ, ರಾಸಾಯನಿಕ ಹಾಗೂ ರಸಗೊಬ್ಬರಗಳ ಖಾತೆಯ ಕೇಂದ್ರ ಸಚಿವ ಭಗವಂತ ಖೂಬಾ ತಿಳಿಸಿದರು.