ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಹಾಗೂ ಸಚಿವ ಈಶ್ವರ ಖಂಡ್ರೆ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ತೀರ್ಥಹಳ್ಳಿ ಶಾಸಕ ಅರಗ ಜ್ಞಾನೇಂದ್ರ ವಿರುದ್ಧ ಅಖಿಲ ಭಾರತ ವೀರಶೈವ ಮಹಾಸಭಾ ಕಾರ್ಯದರ್ಶಿಎಚ್.ಎಂ.ರೇಣುಕ ಪ್ರಸನ್ನ್ ಅವರು ವಿಧಾನ ಸಭಾಧ್ಯಕ್ಷ ಯು.ಟಿ.ಖಾದರ್ ಅವರಿಗೆ ಮಂಗಳವಾರ ದೂರು ನೀಡಿದ್ದಾರೆ. 
ಜಿಲ್ಲೆ

ಅರಗ ಜ್ಞಾನೇಂದ್ರ ವಿರುದ್ಧ ವಿಧಾನ ಸಭಾಧ್ಯಕ್ಷರಿಗೆ ದೂರು

ಬೆಂಗಳೂರು: ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಹಾಗೂ ಸಚಿವ ಈಶ್ವರ ಖಂಡ್ರೆ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ತೀರ್ಥಹಳ್ಳಿ ಶಾಸಕ ಅರಗ ಜ್ಞಾನೇಂದ್ರ ವಿರುದ್ಧ ಅಖಿಲ ಭಾರತ ವೀರಶೈವ ಮಹಾಸಭಾ ಕಾರ್ಯದರ್ಶಿಎಚ್.ಎಂ.ರೇಣುಕ ಪ್ರಸನ್ನ್ ಅವರು ವಿಧಾನ ಸಭಾಧ್ಯಕ್ಷರಿಗೆ ಮಂಗಳವಾರ ದೂರು ನೀಡಿದ್ದಾರೆ. ಕಳೆದ ಆಗಸ್ಟ್ 2 ರಂದು ಅರಗ ಜ್ಞಾನೇಂದ್ರ ಅವರ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿ, ಸದಾಶಿವ ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದರೂ, ಇನ್ನೂವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ ಅದಕ್ಕಾಗಿ ಸಭಾಧ್ಯಕ್ಷರಿಗೆ ದೂರು ಸಲ್ಲಿಸಲಾಗಿದೆ ಎಂದು ಅವರು ತಮ್ಮ ಮನವಿಯಲ್ಲಿ ತಿಳಿಸಿದ್ದಾರೆ. ಬಿಜೆಪಿ ಅರಗ ಜ್ಞಾನೇಂದ್ರ ಅವರ ವಿರುದ್ಧ ಯಾವುದೇ ಶಿಸ್ತು ಕ್ರಮ ಕೈಗೊಳ್ಳದಿದ್ದರೇ, ಅಖಿಲ ಭಾರತ ವೀರಶೈವ ಮಹಾಸಭಾ ವತಿಯಿಂದ ರಾಜ್ಯಾದ್ಯಂತ ಹೋರಾಟ ಮಾಡುವುದಕ್ಕಾಗಿ ಮಹಾಸಭೆಯ ಕರೆದ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ಅಖಿಲ ಭಾರತ ವೀರಶೈವ ಮಹಾಸಭಾ ಕಾರ್ಯದರ್ಶಿಎಚ್.ಎಂ.ರೇಣುಕ ಪ್ರಸನ್ನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.