ನರಗುಂದ: ಪರಿಸರವನ್ನು ಸ್ವಚ್ಛವಾಗಿಟ್ಟುಕೊಂಡು ಪ್ರತಿಯೊಬ್ಬರೂ ಆರೋಗ್ಯ ಪೂರ್ಣ ಭಾರತದ ಕನಸು ನನಸಾಗಿಸಲು ಕೈಜೋಡಿಸಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್. ಯತೀಶ ಹೇಳಿದರು.
ಪಟ್ಟಣದ ಪೊಲೀಸ್ ಠಾಣೆ ಆವರಣದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಶುಕ್ರವಾರ ಹಮ್ಮಿಕೊಂಡಿದ್ದ ಸಸಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಅರಣ್ಯ ನಾಶದಿಂದ ಪ್ರಕೃತಿ ಮುನಿಸಿಕೊಳ್ಳುತ್ತದೆ. ಇದರಿಂದ ನೈಸರ್ಗಿಕ ವಿಕೋಪಗಳು ಉಂಟಾಗಿ ಮನುಷ್ಯನ ನೆಮ್ಮದಿ ಹಾಳಾಗುತ್ತದೆ. ಆದ್ದರಿಂದ, ಪ್ರತಿಯೊಬ್ಬರೂ ತಮ್ಮ ಕೈಲಾದ ಮಟ್ಟಿಗೆ ಪರಿಸರದ ಉಳಿವಿಗೆ ಶ್ರಮಿಸಬೇಕಾಗಿದೆ ಎಂದರು. ನರಗುಂದ ಪೊಲೀಸ್ ಠಾಣೆ ಸೇರಿ ಜಿಲ್ಲೆಯ ಎಲ್ಲ ಠಾಣೆಗಳ ಆವರಣಗಳಲ್ಲಿ ಉದ್ಯಾನ ನಿರ್ವಿುಸಲು ಇಲಾಖೆ ಮುಂದಾಗಿದೆ ಎಂದರು.
ಜಿಲ್ಲಾ ಯೋಜನಾ ನಿರ್ದೇಶಕ ರುದ್ರೇಶ, ಡಿವೈಎಸ್ಪಿ ಶಿವಾನಂದ ಕಟಗಿ, ತಹಸೀಲ್ದಾರ್ ಎ.ಎಚ್. ಮಹೇಂದ್ರ, ಸಿಪಿಐ ಡಿ.ಬಿ. ಪಾಟೀಲ, ಪುರಸಭೆ ಮುಖ್ಯಾಧಿಕಾರಿ ಸಂಗಮೇಶ ಬ್ಯಾಳಿ, ಪಿಎಸ್ಐ ಅಜಿತಕುಮಾರ ಹೊಸಮನಿ, ಸತೀಶ ಮಾಲಾಪೂರ, ವಿ.ಜಿ. ಪವಾರ, ಎಸ್.ಆರ್.ರಾಯನಗೌಡ್ರ, ಬಿ.ಆರ್. ಸೊರಟೂರ, ಉಮೇಶ ಸುಣಗಾರ, ಶರಣಪ್ಪ ನಾಗೇಂದ್ರಗಢ, ಪರಶುರಾಮ ಹೊಸಮನಿ, ಎಸ್.ಎಸ್.ಕಾಶಪ್ಪಯ್ಯನಮಠ, ಕೆ.ಟಿ. ಕಟ್ಟಿಮನಿ, ಇತರರಿದ್ದರು.
EndFragment