ಖಾನಾಪುರ ತಾಲೂಕಿನ ಭೀಮಗಡ ಅಭಯಾರಣ್ಯದ ವ್ಯಾಪ್ತಿಯಲ್ಲಿರುವ ಗ್ರಾಮಸ್ಥರು ಅಭಯಾರಣ್ಯದಿಂದ ಹೊರಬರಲು ಇಚ್ಛಿಸುವ ಜನರಿಗೆ ಪುನರ್ವಸತಿ ಕಲ್ಪಿಸುವ ಬಗ್ಗೆ ಹೆಮ್ಮಡಗಾ ನೇಚರ್​ ಕ್ಯಾಂಪ್​ನಲ್ಲಿ ಶನಿವಾರ ಸಭೆ ಜರುಗಿತು. ಜಿಲ್ಲಾಧಿಕಾರಿ ಮೊಹಮ್ಮದ ರೋಷನ್​, ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಗುಳೇದ ಇತರರಿದ್ದರು. 
ಜಿಲ್ಲೆ

ಅರಣ್ಯವಾಸಿಗಳ ಪುನರ್ವಸತಿಗೆ ಕ್ರಮ

ಬೆಳಗಾವಿ: ಭೀಮಗಡ ಅಭಯಾರಣ್ಯದಲ್ಲಿ ವಾಸಿಸುತ್ತಿರುವ ಖಾನಾಪುರ ತಾಲೂಕಿನ ತಳೇವಾಡಿ ಗ್ರಾಮಸ್ಥರನ್ನು ಸ್ಥಳಾಂತರಿಸುವುದಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಮೊಹಮ್ಮದ್​ ರೋಷನ್​ ಅವರು ಭೀಮಗಡ ನೇಚರ್​ ಕ್ಯಾಂಪ್​ ಆವರಣದಲ್ಲಿ ಭಾನುವಾರ ಗ್ರಾಮಸ್ಥರ ಸಭೆ ನಡೆಸಿದರು.

ಜಿಲ್ಲಾಧಿಕಾರಿ ಮೊಹಮ್ಮದ್​ ರೋಷನ್​ ಮಾತನಾಡಿ, ಅಭಯಾರಣ್ಯದಿಂದ ಹೊರಬರಲು ಇಚ್ಛಿಸುವ ಕುಟುಂಬಗಳಿಗೆ ಸರ್ಕಾರದ ಮಾರ್ಗಸೂಚಿ ಪ್ರಕಾರ ಪುನರ್ವಸತಿ ಕಲ್ಪಿಸಲಾಗುವುದು ಎಂದು ಭರವಸೆ ನೀಡಿದರು.

ಅಭಯಾರಣ್ಯದಲ್ಲಿ ವಾಸಿಸುವ ಜನರಿಗೆ ರಸ್ತೆ, ನೀರು, ವಿದ್ಯುತ್​ ಮತ್ತಿತರ ಮೂಲಸೌಕರ್ಯ ಕಲ್ಪಿಸಲು ಸಾಧ್ಯವಾಗುತ್ತಿಲ್ಲ. ಆದ್ದರಿಂದ ತಳೇವಾಡಿ ಗ್ರಾಮದ ಜನರು ಸ್ವಇಚ್ಛೆಯಿಂದ ಸ್ಥಳಾಂತರಕ್ಕೆ ಒಪ್ಪಿಗೆ ನೀಡಿದರೆ ತಣ ಎಲ್ಲ ರೀತಿಯ ನೆರವು ಕಲ್ಪಿಸಲಾಗುವುದು ಎಂದರು.
ಎಲ್ಲ ಕುಟುಂಬಗಳಿಗೆ ಪರ್ಯಾಯ ಜಾಗ ಮತ್ತು ಮನೆ ಒದಗಿಸಬೇಕೆಂದು ಗ್ರಾಮಸ್ಥರು ಮನವಿ ಮಾಡಿದರು.

ಗ್ರಾಮಸ್ಥರ ಬಳಿ ಇರುವ ದಾಖಲೆಗಳನ್ನು ಪರಿಶೀಲಿಸಬೇಕು. ಪುನರ್ವಸತಿಗಾಗಿ ಸರ್ಕಾರದಿಂದ ಬಿಡುಗಡೆಯಾಗುವ ಅನುದಾನದ ಬಳಕೆಗೆ ಅನುಕೂಲವಾಗುವಂತೆ ಜಿಲ್ಲಾಧಿಕಾರಿಗಳು ಮತ್ತು ಪುನರ್ವಸತಿ ಸಮಿತಿ ಸದಸ್ಯ ಕಾರ್ಯದರ್ಶಿಗಳ ಹೆಸರಿನಲ್ಲಿ ಜಂಟಿ ಖಾತೆ ತೆರೆಯುವಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು.

ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಗುಳೇದ, ಡಿಸಿಎ್​ ಮರಿಯಾ ಕ್ರಿಸ್ತುರಾಜಾ, ಎಸಿಎಫ್​ ಸುನೀತಾ ನಿಂಬರಗಿ, ತಹಸೀಲ್ದಾರ್​ ಪ್ರಕಾಶ ಗಾಯಕವಾಡ ಸೇರಿ ಅರಣ್ಯ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು, ತಳೇವಾಡಿ ಗ್ರಾಮಸ್ಥರು ಇದ್ದರು.