ಜಿಲ್ಲೆ

ಅರಳಿಕಟ್ಟೆ ಜೀರ್ಣೋದ್ಧಾರ ಕಾಮಗಾರಿಗೆ ಚಾಲನೆ

ಪಾಂಡವಪುರ: ತಾಲೂಕಿನ ಡಿಂಕಾ ಹಾಲು ಉತ್ಪಾದಕರ ಸಹಕಾರ ಸಂಘದಿಂದ 5 ಲಕ್ಷ ರೂ. ಅಂದಾಜು ಮೊತ್ತದಲ್ಲಿ ಕೈಗೊಂಡಿರುವ ಅರಳಿಕಟ್ಟೆ ಜೀರ್ಣೋದ್ಧಾರ ಕಾಮಗಾರಿಗೆ ಮನ್‌ಮುಲ್ ನಿರ್ದೇಶಕ ಸಿ.ಶಿವಕುಮಾರ್ ಸೋಮವಾರ ಭೂಮಿಪೂಜೆ ನೆರವೇರಿಸಿದರು.

ಡಿಂಕಾ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘವು ಜಿಲ್ಲೆಗೆ ಮಾದರಿಯಾಗಿದೆ. ತಾಲೂಕಿನಲ್ಲಿ ಅತಿ ಹೆಚ್ಚು ಹಾಲು ಉತ್ಪಾದನೆ ಮಾಡುವ ಸಂಘವಾಗಿದೆ. ಸಂಘವು ಗ್ರಾಮದ ಸಾರ್ವಜನಿಕರ ಅನುಕೂಲಕ್ಕಾಗಿ ಅರಳಿಕಟ್ಟೆ ಜೀರ್ಣೋದ್ಧಾರ ಮಾಡಲು ಮುಂದಾಗಿರುವುದು ಶ್ಲಾಘನೀಯ ವಿಚಾರ. ಸಹಕಾರ ಸಂಘಗಳು ಹಾಲು ಉತ್ಪಾದಕರು ಮತ್ತು ರೈತರ ಅಭಿವೃದ್ಧಿ ಜತೆಗೆ ಸಮಾಜಮುಖಿ ಕಾರ್ಯಗಳನ್ನು ನಡೆಸುವ ಮೂಲಕ ಮಾದರಿಯಾಗಬೇಕು ಎಂದು ಸಲಹೆ ನೀಡಿದರು.

ಡೇರಿ ಅಧ್ಯಕ್ಷ ಗಿರೀಶ್, ಗ್ರಾಪಂ ಅಧ್ಯಕ್ಷ ನಂಜೇಗೌಡ, ಕಾರ್ಯದರ್ಶಿ ಶಿವಪ್ಪ ಇತರರು ಇದ್ದರು.