ಕಲಬುರಗಿ: ಹಿಂದುಳಿದ ಜನಾಂಗದ ಶ್ರೇಯೋಭಿವೃದ್ಧಿಗೆ ದುಡಿದ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ನಮ್ಮೆಲ್ಲರಿಗೆ ಮಾದರಿ ಎಂದು ಜಿಲ್ಲಾ ಪಂಚಾಯಿತಿಯ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ದಿಲೀಪ್ ಆರ್. ಪಾಟೀಲ ಹೇಳಿದರು.
ನಗರದ ಡಾ.ಎಸ್.ಎಂ.ಪಂಡಿತ್ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ಮತ್ತು ರಾಜ್ಯ ಹಿಂದುಳಿದ ವರ್ಗಗಳ ಜಾಗೃತಿ ವೇದಿಕೆ ಸಹಯೋಗದಲ್ಲಿ ಗುರುವಾರ ಆಯೋಜಿಸಿದ್ದ ಡಿ.ದೇವರಾಜ ಅರಸು ಅವರ 105ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಹಿಂದುಳಿದ ನೇತಾರನ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮೂಲಕ ಉದ್ಘಾಟಿಸಿ ಮಾತನಾಡಿದರು.
ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಅನೇಕ ವಸತಿ ನಿಲಯಗಳು, ಉಳುವವನೆ ಒಡೆಯದಂತಹ ಅನೇಕ ಜನಪರ ಯೋಜನೆ ರೂಪಿಸಿದ್ದಾರೆ ಎಂದು ಹೇಳಿದರು.
ಡಿ. ದೇವರಾಜ್ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಕಲಬುರಗಿ ವಿಭಾಗೀಯ ವ್ಯವಸ್ಥಾಪಕ ನಾರಾಯಣ ಮೇರಲಿ ಮಾತನಾಡಿದರು. ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ರಮೇಶ ಜಿ. ಸಂಗಾ ಮಾತನಾಡಿ, ಅರಸು ಅವರು ಹಿಂದುಳಿದ, ಅಲ್ಪಸಂಖ್ಯಾತರ ಜನಾಂಗದ ಸವರ್ಾಂಗೀಣ ಅಭಿವೃದ್ಧಿಗೆ ಶ್ರಮಿಸಿದ ಹಾಗೂ ಉತ್ತಮ ಆಡಳಿತ ನೀಡಿದ ಶ್ರೇಯಸ್ಸು ಅವರಿಗೆ ಸಲ್ಲುತ್ತದೆ ಎಂದರು.
ಡಿ. ದೇವರಾಜ್ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಕಲಬುರಗಿ ಜಿಲ್ಲಾ ವ್ಯವಸ್ಥಾಪಕ ಜಗದೇವಪ್ಪ, ರಾಜ್ಯ ಹಿಂದುಳಿದ ವರ್ಗಗಳ ಜಾಗೃತಿ ವೇದಿಕೆ ಮುಖಂಡ ಅಶೋಕ ಪೋತ್ದಾರ, ಬಿ.ಎಂ.ರಾವೂರ, ಶಂಕರ ಕಟ್ಟಿ ಸಂಗಾವಿ, ಅಶೋಕ ಡೈಮಂಡ್, ಮಲ್ಲಿಕಾಜರ್ುನ ಹೆಳವರ, ಸಾಯಬಣ್ಣಾ ಹೆಳವರ, ರಾಜೇಂದ್ರ ರಾಜನಾಳ, ಶರಣು ಕೋಲಿ, ಡಾ.ಬಾಬು ಪೂಜಾರಿ ಇತರರು ಇದ್ದರು.
ಮೂರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲ ಅಣವೀರ ಹರಸೂರ ನಿರೂಪಣೆ ಮಾಡಿದರು. ವ್ಯವಸ್ಥಾಪಕ ಸಂತೋಷ ರೆಡ್ಡಿ ವಂದಿಸಿದ್ದರು.