ಜಿಲ್ಲೆ

ಅರುಣೋದಯ ಶಾಲೆ ಮಕ್ಕಳಿಂದ ಯೋಗಾಭ್ಯಾಸ

ರೇವಣಸಿದ್ದಪ್ಪ ಪಾಟೀಲ್

ಬೀದರ್: ಯೋಗ ದಿನಾಚರಣೆ ಅಂಗವಾಗಿ ಇಲ್ಲಿಯ ಅರುಣೋದಯ ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ ಮಕ್ಕಳು ಯೋಗಾಭ್ಯಾಸ ಮಾಡಿದರು.
ಯೋಗ ಶಿಕ್ಷಕರಾದ ರಾಜು ಜ್ಯಾಂತಿಕರ್ ಹಾಗೂ ಗೋರಕನಾಥ ಅವರು ಯೋಗದ ವಿವಿಧ ಪ್ರಕಾರಗಳನ್ನು ಹೇಳಿಕೊಟ್ಟರು. ಋಷಿಕೇಶ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ಸಂತೋಷಕುಮಾರ ಮಂಗಳೂರೆ, ಅರುಣೋದಯ ಪ್ರೌಢಶಾಲೆ ಮುಖ್ಯಶಿಕ್ಷಕಿ ಈಶ್ವರಿ ಬೇಲೂರೆ, ಪ್ರಾಥಮಿಕ ಶಾಲೆ ಮುಖ್ಯಶಿಕ್ಷಕ ಬಸವರಾಜ ಮುಗುಟಾಪುರೆ, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಇದ್ದರು.