ಜಿಲ್ಲೆ

ಅರ್ಜಿ ಅಹ್ವಾನ

ಎಸ್.ಎರ್ರಿಸ್ವಾಮಿ

ಬಳ್ಳಾರಿ : ಕೃಷಿ ಇಲಾಖೆ ವತಿಯಿಂದ ಪ್ರಸ್ತಕ ಸಾಲಿನಲ್ಲಿ ಕೃಷಿ ಯಾಂತ್ರೀಕರಣ ಹಾಗೂ ಕೃಷಿ ಸಂಸ್ಕರಣ ಘಟಕಗಳಿಗೆ ಬಳ್ಳಾರಿ ಹಾಗೂ ಕುರುಗೋಡು ತಾಲೂಕು ವ್ಯಾಪ್ತಿಗೆ ಬರುವ ರೈತರಿಗೆ ಸಾಮಾನ್ಯ ವರ್ಗದಡಿ ಶೇ. 50 ರಷ್ಟು ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಸೂಕ್ಷ್ಮ ನೀರಾವರಿ ಯೋಜನೆಯಡಿ ತುಂತುರು ನೀರಾವರಿ ಘಟಕಗಳಿಗೆ ಎಲ್ಲಾ ವರ್ಗದ ರೈತರಿಗೆ ಶೇ. 90 ರಷ್ಟು ಸಹಾಯಧನ ನೀಡಲಾಗುತ್ತದೆ. ಆಸಕ್ತ ರೈತರು ಅರ್ಜಿಗಳನ್ನು ಸಂಬಂಧಪಟ್ಟ ರೈತ ಸಂಪರ್ಕ ಕೇಂದ್ರಗಳಲ್ಲಿ ಸಲ್ಲಿಸುವ ಮೂಲಕ ನೋಂದಾಯಿಸಿಕೊಳ್ಳಬಹುದು.
ಮಾಹಿತಿಗೆ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಸಂಪರ್ಕಿಸಬಹುದು ಎಂದು ಸಹಾಯಕ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.