ಜಿಲ್ಲೆ

ಅರ್ಜಿ ಆಹ್ವಾನ

ಬಳ್ಳಾರಿ : ಕರ್ನಾಟಕ ವಿದ್ಯುತ್ ನಿಗಮ ನಿಯಮಿತ ವತಿಯಿಂದ ಇಲ್ಲಿನ ಬಳ್ಳಾರಿ ಶಾಖೋತ್ಪನ್ನ ವಿದ್ಯುತ್ ಕೇಂದ್ರದಲ್ಲಿ ಒಂದು ವರ್ಷ ಅವಧಿ ಶಿಶಿಕ್ಷದ ತರಬೇತಿ ನೀಡಲು ಉದ್ದೇಶಿಸಲಾಗಿದ್ದು, ಅರ್ಹ ಐಟಿಐ ಮತ್ತು ಎಸ್‌ಎಸ್‌ಎಲ್‌ಸಿ ಪೂರ್ಣಗೊಳಿಸಿದ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅರ್ಹ ಅಭ್ಯರ್ಥಿಗಳು ತಮ್ಮ ಸ್ವವಿವರದೊಂದಿಗೆ ವೃತ್ತಿಗನುಗುಣವಾಗಿ ಆನ್‌ಲೈನ್ ವೆಬ್‌ಸೈಟ್‌ನಲ್ಲಿ ಅ.07 ಸಂಜೆ 5 ಗಂಟೆಯೊಳಗಾಗಿ ಅರ್ಜಿ ಸಲ್ಲಿಸಬೇಕು. ಮಾಹಿತಿಗೆ ಬಳ್ಳಾರಿ ಶಾಖೋತ್ಪನ್ನ ವಿದ್ಯುತ್ ಕೇಂದ್ರ ಕಚೇರಿ ಅಥವಾ ಮೊ.9901340029 ಗೆ ಸಂಪರ್ಕಿಸಬಹುದು ಎಂದು ಕೇಂದ್ರದ ಉಪ ಪ್ರಧಾನ ಸಂಪಾದಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.