ಜಿಲ್ಲೆ

ಅರ್ಜಿ ಆಹ್ವಾನ

ಬಳ್ಳಾರಿ : ಮೀನುಗಾರಿಕೆ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ವಿವಿಧ ಯೋಜನೆಗಳಡಿ ರಾಜ್ಯದ ವಿವಿಧ ಜಲಾಶಯಗಳಿಗೆ 80-100 ಗಾತ್ರದ ಬಲಿತ ಬಿತ್ತನೆ ಮೀನು ಮರಿಗಳನ್ನು ಸರಬರಾಜು ಮಾಡಲು ಮೀನುಗಾರಿಕೆ ಇಲಾಖೆಯಲ್ಲಿ ನೋಂದಾಯಿಸಿರುವ ಆಸಕ್ತ ಮೀನುಮರಿ ಪಾಲನೆದಾರರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಇಲಾಖೆಯ ಉಪ ನಿರ್ದೇಶಕ ಶಿವಣ್ಣ ತಿಳಿಸಿದ್ದಾರೆ. ಅರ್ಜಿಗಳನ್ನು ಸೆ.26 ರೊಳಗಾಗಿ ಸಲ್ಲಿಸಬೇಕು. ಮಾಹಿತಿಗೆ ವಲಯ, ಜಿಲ್ಲಾ, ತಾಲೂಕು ಮೀನುಗಾರಿಕೆ ಇಲಾಖೆಯ ಕಚೇರಿ ಅಥವಾ ವೆಬ್‌ಸೈಟ್ ಲಿಂಕ್‌ಗೆ ಭೇಟಿ ನೀಡಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.