ಜಿಲ್ಲೆ

ಅರ್ಜಿ ಆಹ್ವಾನ

ಬಳ್ಳಾರಿ : ಜಿಲ್ಲಾಡಳಿತ, ಜಿಪಂ ಸಹಯೋಗದಲ್ಲಿ ಡಿಎಂಎಫ್ ಅನುದಾನದಡಿ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ, ಮತ್ತು ಜೀವನೋಪಾಯ ಇಲಾಖೆ ವತಿಯಿಂದ ಬಳ್ಳಾರಿಯ ಗ್ರಾಮೀಣ ಮತ್ತು ನಗರ ಪ್ರದೇಶದ ನಿರುದ್ಯೋಗಿ ಬಿ.ಕಾಂ ಪದವಿ ವಿದ್ಯಾರ್ಹತೆವುಳ್ಳ ಯುವಕ-ಯುವತಿಯರಿಗೆ ಟ್ಯಾಲಿ (ಕಂಪ್ಯೂಟರ್) ಉಚಿತ ತರಬೇತಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಪ್ರಾಣೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಆಸಕ್ತ ಅಭ್ಯರ್ಥಿಗಳು ಸೆ.26 ರೊಳಗಾಗಿ ವೆಬ್‌ಸೈಟ್ ಮುಖಾಂತರ ಅಭ್ಯರ್ಥಿಗಳು ಹೆಸರು ನೋಂದಾಯಿಸಿಕೊಳ್ಳಬಹುದಾಗಿದ್ದು, ಮೆರಿಟ್ ಮೂಲಕ ತರಬೇತಿಗೆ ಅಯ್ಕೆ ಮಾಡಲಾಗುವುದು. ಮಾಹಿತಿಗೆ ಜಿಲ್ಲಾ ಕೌಶಲ್ಯಾಭಿವೃದ್ಧಿ ಕಚೇರಿ ಅಥವಾ ದೂ.08392-294230, ಮೊ.9964502514, 9844444958 ಗೆ ಸಂಪರ್ಕಿಸಬಹುದು.