ಚಿತ್ರದುರ್ಗ:ಸಾರ್ವಜನಿಕ ಗ್ರಂಥಾಲಯ ಇಲಾಖೆ ರಾಜ್ಯದ ನಾಲ್ಕು ವಿಭಾಗಗಳಾದ ಬೆಂಗಳೂರು, ಮಂಗಳೂರು, ಧಾರವಾಡ ಮ ತ್ತು ಕಲಬುರಗಿ ಕೇಂದ್ರಗಳಲ್ಲಿ ಆರು ತಿಂಗಳ ಅವಧಿಯ ಗ್ರಂಥಾಲಯ ವಿಜ್ಞಾನ ತರಬೇತಿ ಶಾಲಾ ಪ್ರವೇಶಕ್ಕೆ ಅರ್ಜಿ ಸಲ್ಲಿಕೆ ಅವಧಿಯನ್ನು ಜ.31ರವರೆಗೆ ವಿಸ್ತರಿಸಿದೆ.
ಈ ಮುನ್ನ ಅರ್ಜಿ ಸಲ್ಲಿಕೆಗೆ ಕೊನೆ ದಿನಾಂಕವನ್ನು ಜ.10 ಕ್ಕೆ ನಿಗದಿಪಡಿಸಲಾಗಿತ್ತು ಎಂದು ನಗರ ಕೇಂದ್ರ ಗ್ರಂಥಾಲಯದ ಮುಖ್ಯಗ್ರಂಥಾಲಯಾಧಿಕಾರಿ ಬಸವರಾಜಕೊಳ್ಳಿ ತಿಳಿಸಿದ್ದಾರೆ.