ಚಿತ್ರದುರ್ಗ: ನೂತನ ಶೈಕ್ಷಣಿಕ ಸಾಲಿನ 6ನೇ ತರಗತಿ ಪ್ರವೇಶಕ್ಕಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಡಾ.ಎಪಿಜೆ ಅಬ್ದುಲ್ ಕಲಾಂ ಮತ್ತು ಅಲ್ಪಸಂಖ್ಯಾತರ ಮುರಾರ್ಜಿ ದೇಸಾಯಿ ವಸತಿ ಶಾಲೆಗಳಿಗೆ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್, ಪಾರ್ಸಿ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಇತರೆ ಹಿಂದುಳಿದ ವರ್ಗಗಳ ಅರ್ಹ ವಿದ್ಯಾರ್ಥಿಗಳ ಅರ್ಜಿ ಸಲ್ಲಿಕೆ ಅವಧಿಯನ್ನು ಮಾ.25ರವರೆಗೆ ವಿಸ್ತರಿಸಲಾಗಿದೆ.
ಅರ್ಜಿಯನ್ನು ಆನ್‌ಲೈನ್‌ನಲ್ಲಿ ಸಲ್ಲಿಸಬೇಕು. ಮಾಹಿತಿಗೆ ಹತ್ತಿರದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವಸತಿ ಶಾಲೆಗಳು, ಅಲ್ಪಸಂಖ್ಯಾತರ ಜಿಲ್ಲಾ, ತಾಲೂಕು ಮಾಹಿತಿ ಕೇಂದ್ರ ಸಂಪರ್ಕಿಸಬಹುದೆಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಜಿ.ರೇಖಾ ತಿಳಿಸಿದ್ದಾರೆ.
----