ಕಲಬುರಗಿ: ಜಿಲ್ಲೆಯ ಶಿಶು ಅಭಿವೃದ್ಧಿ ಯೋಜನೆಗಳ ಕಚೇರಿಯಲ್ಲಿ ಖಾಲಿಯಿರುವ ೬೧ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ೨೩೮ ಅಂಗನವಾಡಿ ಸಹಾಯಕಿಯರ ಹುದ್ದೆ ಭರ್ತಿಗೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಕೆ ಅವಧಿ ಆಗಸ್ಟ್ ೧೪ರವರೆಗೆ ವಿಸ್ತರಿಸಲಾಗಿದೆ ಎಂದು ಕಲಬುರಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ. ಅರ್ಹ ಮಹಿಳೆಯರು ಹಾಗೂ ಮಹಿಳಾ ಲಿಂಗತ್ವ ಅಲ್ಪಸಂಖ್ಯಾತ ಅಭ್ಯರ್ಥಿಗಳು ವೆಬ್‌ಸೈಟ್‌ದಲ್ಲಿ ಅನ್‌ಲೈನ್ ಮೂಲಕ ಆಗಸ್ಟ್ ೧೪ ರೊಳಗಾಗಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ಸಂಬAಧಿಸಿದ ಆಯಾ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿ ಸಂಪರ್ಕಿಸಲು ಕೋರಲಾಗಿದೆ.