ಸೋಮವಾರಪೇಟೆ: ಸರ್ಕಾರದ ಆದೇಶದಂತೆ ಸರ್ಕಾರಿ ಜಮೀನಿನಲ್ಲಿ ಪ್ಲಾಂಟೇಷನ್ ಬೆಳೆಗಳನ್ನು ಬೆಳೆಯುತ್ತಿರುವವರಿಗೆ ಜಮೀನುಗಳನ್ನು ಗುತ್ತಿಗೆ ನೀಡುವ ಸಂಬಂಧ ಅರ್ಜಿಗಳನ್ನು ನೀಡಲು ಕಾಲಾವಕಾಶ ವಿಸ್ತರಿಸಬೇಕು ಎಂದು ಸೋಮವಾರಪೇಟೆ ತಾಲೂಕು ರೈತ ಹೋರಾಟ ಸಮಿತಿ ಹಾಗೂ ರೈತ ಸಂಘದಿಂದ ತಹಸೀಲ್ದಾರ್ ಶ್ರೀಧರ್ ಕಂಕನವಾಡಿ ಮೂಲಕ ಸರ್ಕಾರಕ್ಕೆ ಸೋಮವಾರ ಮನವಿ ಸಲ್ಲಿಸಲಾಯಿತು.
ಅರ್ಜಿ ಸ್ವೀಕರಿಸಲು ಡಿ.31ರವರೆಗೆ ಕಾಲವಕಾಶ ನೀಡಿದ್ದು, 3 ತಿಂಗಳವರೆಗೆ ವಿಸ್ತರಣೆ ಮಾಡಬೇಕು ಎಂದು ಮನವಿ ಮಾಡಿದರು. ತಾಲೂಕು ರೈತ ಹೋರಾಟ ಸಮಿತಿ ಅಧ್ಯಕ್ಷ ಕೆ.ಬಿ.ಸುರೇಶ್, ತಾಲೂಕು ರೈತ ಸಂಘದ ಅಧ್ಯಕ್ಷ ದಿನೇಶ್, ಪ್ರಮುಖರಾದ ಅಶೋಕ್, ಆದಿತ್ಯ ಹರಗ, ಎಸ್.ಬಿ.ಭರತ್ ಕುಮಾರ್, ಯಡೂರು ಜಗದೀಶ್, ಲಿಂಗೇರಿ ರಾಜೇಶ್ ಇದ್ದರು.