ಎಚ್.ಡಿ.ಕೋಟೆ ಪಟ್ಟಣದ ತಾಲೂಕು ಆಡಳಿತ ಸೌಧದ ಸಭಾಂಗಣದಲ್ಲಿ ಗಣರಾಜ್ಯೋತ್ಸವ ಹಾಗೂ ಕಸಾಪ ಸಮ್ಮೇಳನದ ಕಾರ್ಯಕ್ರಮದ ಪೂರ್ವಭಾವಿ ಸಭೆಯಲ್ಲಿ ಶಾಸಕ ಅನಿಲ್ ಚಿಕ್ಕಮಾದು ಮಾತನಾಡಿದರು. 
ಜಿಲ್ಲೆ

ಅರ್ಥಪೂರ್ಣ ಗಣರಾಜ್ಯೋತ್ಸವ ಆಚರಣೆಗೆ ಸೂಚನೆ

ಎಚ್.ಡಿ.ಕೋಟೆ: ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಣೆ ಮಾಡಲು ಶಾಸಕ ಅನಿಲ್ ಚಿಕ್ಕಮಾದು ಅಧಿಕಾರಿಗಳಿಗೆ ಸೂಚಿಸಿದರು.

ಪಟ್ಟಣದ ತಾಲೂಕು ಆಡಳಿತಸೌಧದ ಸಭಾಂಗಣದಲ್ಲಿ ಬುಧವಾರ ಕರೆಯಲಾಗಿದ್ದ ಗಣರಾಜ್ಯೋತ್ಸವ ಕಾರ್ಯಕ್ರಮದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.

ಸಂವಿಧಾನದ ಆಶಯಗಳ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸುವ ಮಹತ್ವದ ಕೆಲಸ ಆಗಬೇಕು. ಎಲ್ಲ ಶಾಲಾ, ಕಾಲೇಜುಗಳು, ಕಚೇರಿಗಳಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರವನ್ನು ಇರಿಸಿ ಸಂವಿಧಾನದ ಪೀಠಿಕೆಯನ್ನು ಬೋಧಿಸಬೇಕು ಎಂದು ತಿಳಿಸಿದರು.

ವಿವಿಧ ಶಾಲಾ ಕಾಲೇಜುಗಳಿಂದ ಸ್ತಬ್ಧಚಿತ್ರ ಮಾಡುವ ಬಗ್ಗೆ ಬಿಇಒ ಅವರಿಗೆ ಸೂಚಿಸಿದರು. ತಾಲೂಕಿನ ಎಲ್ಲ ಗ್ರಾಮ ಪಂಚಾಯಿತಿಗಳ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಬೇಕು ಎಂದು ಇಒ ಅವರಿಗೆ ಸೂಚನೆ ನೀಡಿದರು.

ಗಡಿಭಾಗದಲ್ಲಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನವನ್ನು ಫೆಬ್ರವರಿ ತಿಂಗಳ ಎರಡನೇ ವಾರದಲ್ಲಿ ನಡೆಸಲು ಸಭೆಯಲ್ಲಿ ತೀರ್ಮಾನಿಸಲಾಯಿತು. ಇದೇ ಸಂದರ್ಭದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ನಡೆದ ಕಾರ್ಯಕ್ರಮದ ಖರ್ಚು-ವೆಚ್ಚದ ಚರ್ಚೆ ಮಾಡಲಾಯಿತು. ಶುಕ್ರವಾರ ಮತ್ತೊಮ್ಮೆ ಸಮ್ಮೇಳನ ನಡೆಸುವ ಬಗ್ಗೆ ಸರ್ವ ಸದಸ್ಯರ ಸಭೆ ಕರೆಯಲು ತೀರ್ಮಾನಿಸಲಾಯಿತು.

ಕಸಾಪ ಜಿಲ್ಲಾ ಅಧ್ಯಕ್ಷ ಮಡ್ಡಿಕೆರೆ ಗೋಪಾಲ್, ನಿಕಟಪೂರ್ವ ಅಧ್ಯಕ್ಷ ವೈ.ಡಿ.ರಾಜಣ್ಣ, ಚಂದ್ರಶೇಖರ್, ತಾಲೂಕು ಅಧ್ಯಕ್ಷ ಕನ್ನಡ ಪ್ರಮೋದ್, ಪುರಸಭಾ ಸ್ಥಾಯಿ ಸಮಿತಿ ಅಧ್ಯಕ್ಷ ಐಡಿಯಾ ವೆಂಕಟೇಶ್, ಸದಸ್ಯ ಎಚ್.ಸಿ.ನರಸಿಂಹಮೂರ್ತಿ, ಯಶವಂತ್, ಬಸವರಾಜಪ್ಪ, ಬಿ.ವಿ.ಬಸವರಾಜು, ಇಒ ರಾಜೇಶ್ ಜೆರಾಲ್ಡ್, ಬಿಇಒ ಉದಯಕುಮಾರ್, ಸಿಡಿಪಿಒ ಆಶಾ, ಉಪ ನೋಂದಣಾಧಿಕಾರಿ ಅಧಿಕಾರಿ ನಂದಿನಿ, ಅಬಕಾರಿ ಅಧಿಕಾರಿ ಗೀತಾ, ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿ ಶಶಿಕಲಾ, ಡಾ.ಪೂರ್ಣಾನಂದ, ಗೋಪಾಲಕೃಷ್ಣ ಮೂರ್ತಿ, ಮುಖಂಡರಾದ ಬಸವರಾಜು, ಮಹೇಂದ್ರ, ರಘುರಾಮ್, ಗಿರೀಶ್ ಮೂರ್ತಿ, ಶಿವಕುಮಾರ್, ಸಣ್ಣಕುಮಾರ್ ಇತರರಿದ್ದರು.