ಚಿತ್ರದುರ್ಗ: ಗ್ಯಾರಂಟಿ ಯೋಜನೆಗಳಿಂದ ಹೊರಗುಳಿದ ಅರ್ಹ ಫಲಾನುಭವಿಗಳನ್ನು ಗುರುತಿಸಿ ಅವರಿಗೆ ಯೋಜನೆಗಳ ಲಾಭ ತಲುಪಿಸಬೇಕೆಂ ದು ಗ್ಯಾರಂಟಿ ಯೋಜನೆಗಳ ಜಿಲ್ಲಾ ಅನುಷ್ಠಾನ ಸಮಿತಿ ಅಧ್ಯಕ್ಷ ಶಿವಣ್ಣ ಅಧಿಕಾರಿಗಳಿಗೆ ಸೂಚಿಸಿದರು.
ಜಿಪಂದಲ್ಲಿ ಮಂಗಳವಾರ ಗ್ಯಾರಂಟಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಯೋಜನೆಗಳ ಅನುಷ್ಠಾನಕ್ಕಾಗಿ ಸರ್ಕಾರ ಸಾವಿರಾರು ಕೋಟಿ ರೂ.ಗಳನ್ನು ಖರ್ಚು ಮಾಡುತ್ತಿದೆ. ಈ ಕುರಿತು ಸಾರ್ವಜನಿಕರಿಗೆ ಹೆಚ್ಚಿನ ಮಾಹಿತಿ ದೊರಕುವಂತಾಗಬೇಕು ಎಂದರು.
ಗೃಹಲಕ್ಷ್ಮೀ, ಅನ್ನಭಾಗ್ಯ ಯೋಜನೆಗಳಡಿ ಫಲಾನುಭವಿಗಳ ಖಾತೆಗೆ ಜಮೆ ಮಾಡಿದ ಹಣ, ಫಲಾನುಭವಿಗಳ ಸಂಖ್ಯೆಗಳ ಸಂಕ್ಷಿಪ್ತ ಮಾ ಹಿತಿಯನ್ನು ಎಲ್ಲ ಅಂಗನವಾಡಿ, ನ್ಯಾಯಬೆಲೆ ಅಂಗಡಿಗಳ ಮುಂದಿನ ಫಲಕಗಳಲ್ಲಿ ಪ್ರದರ್ಶಿಸಬೇಕು. ಪ್ರತಿ ತಿಂಗಳು ಮಹಿಳಾ ಪ್ರಯಾ ಣಿಕರ ಸಂಖ್ಯೆಯನ್ನು ಫಲಾನುಭವಿಗಳು ಹಾಗೂ ಸರ್ಕಾರದಿಂದ ಪಾವತಿಸಿದ ಮೊತ್ತದ ವಿವರಗಳನ್ನು ಕ್ರೋಡೀಕರಿಸಿ ಕೆಎಸ್‌ಆರ್‌ಟಿಸಿ ಅಧಿ ಕಾರಿಗಳು, ಗೃಹಜ್ಯೋತಿ ಯೋಜನೆ ಫಲಾನುಭವಿಗಳ ಹಾಗೂ ಸರ್ಕಾರದಿಂದ ಭರಿಸಿರುವ ಮೊತ್ತದ ವಿವರವನ್ನು ಆಯಾ ಕಚೇರಿಗಳಲ್ಲಿ ಪ್ರದರ್ಶಿಸಬೇಕೆಂದರು. ಯುವನಿಧಿ ಯೋಜನೆ ಪರಿಣಾಮಕಾರಿ ಅನುಷ್ಠಾನಕ್ಕೆ ಅಭಿಯಾನ ನಡೆಸಬೇಕೆಂದರು.
ಸಮಿತಿ ಸದಸ್ಯ ಕಾರ‌್ಯದರ್ಶಿ, ಜಿ.ಪಂ ಸಿಇಒ ಎಸ್.ಜೆ.ಸೋಮಶೇಖರ್, ಸಮಿತಿ ಉಪಾಧ್ಯಕ್ಷ ಡಿ.ಎನ್.ಮೈಲಾರಪ್ಪ, ನಾಗೇಶ್‌ರೆಡ್ಡಿ,ನಿರಂಜನ್ ಸೇರಿದಂತೆ ಸದಸ್ಯರು, ಆಹಾರ ಇಲಾಖೆ ಜಂಟಿ ನಿರ್ದೇಶಕ ಮಧುಸೂಧನ್, ಬೆಸ್ಕಾಂ ಇಂಜಿನಿಯರ್ ನಾಗರಾಜ್, ಕೆಎಸ್‌ಆರ್‌ಟಿಸಿ ಸಂಚಾರ ನಿಯಂತ್ರಕ ಡಿ.ಟಿ.ಸುರೇಶ್, ಉದ್ಯೋಗ ವಿನಿಮಯ ಕಚೇರಿಯ ರವಿಕುಮಾರ್, ಶಿಕ್ಷಣ ಇಲಾಖೆ ಮಂಜುನಾಥ್, ಮಹಿಳಾ ಮ ತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಭಾರತಿ ಆರ್.ಬಣಕಾರ್ ಮತ್ತಿತರ ಅಧಿಕಾರಿಗಳಿದ್ದರು.
ಕೋಟ್.
ಜಿಲ್ಲಾ ಹಾಗೂ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಗಳ ಕಚೇರಿಗಳನ್ನು ಶೀಘ್ರ ಸ್ಥಾಪಿಸಿ, ನೋಡಲ್ ಅಧಿಕಾರಿಗಳನ್ನು ನೇಮಿಸಲಾಗುವುದು.
ಎಸ್.ಜೆ.ಸೋಮಶೇಖರ್, ಸಿಇಒ, ಜಿಪಂ, ಚಿತ್ರದುರ್ಗ.