ಚಾಮರಾಜನಗರ: ಕರ್ನಾಟಕ ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮವು ವೀರಶೈವ-ಲಿಂಗಾಯತ ಜಾತಿ ಹಾಗೂ ಉಪಜಾತಿಗೆ ಸೇರಿದ (ಪ್ರವರ್ಗ-3ಬಿ) ಸಮುದಾಯದ ಅಭಿವೃದ್ದಿಗಾಗಿ ವಿವಿಧ ಯೋಜನೆಗಳನ್ನು ಅನುಷ್ಠಾನಗೊಳಿಸುತ್ತಿದ್ದು ಅರ್ಹರಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಶೈಕ್ಷಣಿಕ ಸಾಲ ಯೋಜನೆ, ಜೀವಜಲ, ಕಾಯಕ ಕಿರಣ, ಭೋಜನಾಲಯ ಕೇಂದ್ರ, ವಿಭೂತಿ ನಿರ್ಮಾಣ ಘಟಕ, ಸ್ವಾವಲಂಬಿ ಸಾರಥಿ, ಸ್ವಾತಂತ್ರೃ ಅಮೃತ ಮಹೋತ್ಸವ ಮುನ್ನಡೆ ಯೋಜನೆ ಹಾಗೂ ಸ್ವಸಹಾಯ ಸಂಘಗಳ ಉತ್ತೇಜನ ಸೌಲಭ್ಯಗಳಿಗೆ ಅರ್ಜಿ ಸಲ್ಲಿಸಬಹುದು. ಅರ್ಹ ಫಲಾಪೇಕ್ಷಿಗಳು ಗ್ರಾಮ ಒನ್, ಬೆಂಗಳೂರು ಒನ್, ಕರ್ನಾಟಕ ಒನ್ ನಾಗರಿಕ ಸೇವಾ ಕೇಂದ್ರಗಳಲ್ಲಿ ಸೇವಾಸಿಂಧು ಪೋರ್ಟಲ್‌ನಲ್ಲಿ ಅಗತ್ಯ ದಾಖಲೆಗಳೊಂದಿಗೆ ಜೂ.30ರೊಳಗೆ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್ ಸೈಟ್ ಅಥವಾ ನಿಗಮದ ದೂ.ಸಂ. 080-22865522, ಮೊ.ಸಂ. 9900012351 ಹಾಗೂ ದೂ.ಸಂ. 08226-223587 ಸಂಪರ್ಕಿಸುವಂತೆ ಕರ್ನಾಟಕ ವೀರಶೈವ ಲಿಂಗಾಯಿತ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.