ಹೊಸಪೇಟೆ: ಪ.ಜಾತಿ, ಪ.ಪಂಗಡ ಹಾಗೂ ಹಿಂದುಳಿದ ವರ್ಗಗಳ ಅಲೆಮಾರಿ ಮಕ್ಕಳ ಶಿಕ್ಷಣಕ್ಕೆ ಪ್ರತ್ಯೇಕ ವಸತಿ ನಿಲಯ ಆರಂಭಿಸಬೇಕು ಎಂದು ಒತ್ತಾಯಿಸಿ ಅಲೆಮಾರಿ, ಅರೆ ಅಲೆಮಾರಿ ವಿಮುಕ್ತ ಬುಡಕಟ್ಟು ಒಕ್ಕೂಟದ ಅಧ್ಯಕ್ಷ ಸಣ್ಣ ಮಾರೆಪ್ಪ ಬುಧವಾರ ಸಚಿವ ಜಮೀರ್ ಅಹಮದ್ ಖಾನ್‌ಗೆ ಮನವಿ ಸಲ್ಲಿಸಿದರು.
ಪ.ಜಾತಿಯ 51, ಪ. ಪಂಗಡ 23 ಮತ್ತು ಹಿಂದುಳಿದ ವರ್ಗದ 46 ಸೇರಿದಂತೆ ಒಟ್ಟು 120 ಸಮುದಾಯಗಳು ಅಲೆಮಾರಿ, ಅರೆ ಅಲೆಮಾರಿ ಪಟ್ಟಿಯಲ್ಲಿವೆ. ಸಮುದಾಯದ ಮಕ್ಕಳಿಗೆ ಮುರಾರ್ಜಿ ಶಾಲೆಗಳಲ್ಲಿ ಪ್ರವೇಶ ಸಿಗುತ್ತಿಲ್ಲ. ಇದರಿಂದ ಮಕ್ಕಳು ಶಿಕ್ಷಣದಿಂದ ವಂಚಿತರಾಗಿ ಭಿಕ್ಷಾಟನೆಯಲ್ಲಿ ತೊಡಗುವ ಆತಂಕ ಕಾಡುತ್ತಿದೆ ಎಂದು ಅಳಲು ತೋಡಿಕೊಂಡರು.
ಇದನ್ನೂ ಓದಿ: ಅಲೆಮಾರಿ, ಅರೆ ಅಲೆಮಾರಿ ಜನರಿಗೆ ಸೌಲಭ್ಯ ಒದಗಿಸಿ
ಜಿಲ್ಲೆಯಲ್ಲಿ ಅಲೆಮಾರಿ ಮಕ್ಕಳಿಗಾಗಿ ಪ್ರತ್ಯೇಕ ಶಾಲೆ ಆರಂಭಿಸಬೇಕು. ಅಲೆಮಾರಿಗಳಿಗೆ ನಿವೇಶನ, ಮನೆ ಮಂಜೂರು ಹಾಗೂ ಕಾಲನಿಗಳಿಗೆ ಅಗತ್ಯ ಮೂಲಭೂತ ಸೌಲಭ್ಯ ಕಲ್ಪಿಸಬೇಕು. ಭೂ-ಒಡೆತನ ಯೋಜನೆ ಅಡಿಯಲ್ಲಿ ಕೃಷಿ ಜಮೀನು, ಗಂಗಾ ಕಲ್ಯಾಣ ಯೋಜನೆ ಸೌಲಭ್ಯ ಒದಗಿಸಬೇಕೆಂದು ಒತ್ತಾಯಿಸಿದರು.