ಜಿಲ್ಲೆ

ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷರ ಪ್ರವಾಸ

ಹಾವೇರಿ: ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಅಬ್ದುಲ್ ಅಜೀಮ್ ಮಾ.17ರಂದು ಶಿಗ್ಗಾಂವಿ ಪ್ರವಾಸ ಕೈಗೊಂಡಿದ್ದಾರೆ. ಬೆಳಗ್ಗೆ 10.30ಕ್ಕೆ ಶಿಗ್ಗಾಂವಿಯಲ್ಲಿ ಕ್ರೈಸ್ತ ಸಮುದಾಯದ ಮುಖಂಡರೊಂದಿಗೆ, ಬೆಳಗ್ಗೆ 11 ಗಂಟೆಗೆ ಜೈನ, ಬೌದ್ಧ ಮತ್ತು ಸಿಖ್ ಸಮುದಾಯಗಳ ಧಾರ್ಮಿಕ ಮುಖಂಡರೊಂದಿಗೆ ಕುಂದುಕೊರತೆಗಳ ಸಭೆ ನಡೆಸುವರು. ಮಧ್ಯಾಹ್ನ 3 ಗಂಟೆಗೆ ಮುಸ್ಲಿಂ ಸಮುದಾಯದ ಮುಖಂಡರೊಂದಿಗೆ ಕುಂದುಕೊರತೆ ಸಭೆ ನಡೆಸಲಿದ್ದಾರೆ.