ಚಿತ್ರದುರ್ಗ: ಅಲ್ಪಸಂಖ್ಯಾತರ ಶಕ್ತಿಯಿಂದಾಗಿ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ಇದನ್ನು ಘಂಟಾಘೋಷವಾಗಿ ಎಲ್ಲಿ ಬೇಕಾದರೂ ಹೇಳುತ್ತೇನೆ ಎಂದು ಮೊಳಕಾಲ್ಮುರು ಶಾಸಕ ಎನ್.ವೈ.ಗೋಪಾಲಕೃಷ್ಣ ಹೇಳಿದರು.
ವಕ್ಫ್ ಮಂಡಳಿ ರಾಜ್ಯ ಅಧ್ಯಕ್ಷರಾಗಿ ಆಯ್ಕೆಯಾದ ಕೆ.ಅನ್ವರ್ ಬಾಷಾ ಅವರಿಗೆ ಜಿಲ್ಲಾ ವಕ್ಫ್ ಮಂಡಳಿಯಿಂದ ಎಸ್.ಜಿ.ಕಲ್ಯಾಣ ಮಂಟಪದಲ್ಲಿ ಮಂಗಳವಾರ ನಡೆದ ಸನ್ಮಾನ ಸಮಾರಂಭದಲ್ಲಿ ಮಾತನಾಡಿದರು.
ಎಸ್ಸಿ, ಎಸ್ಟಿ ಬಿಟ್ಟರೆ ಅಲ್ಪಸಂಖ್ಯಾತರು ನಂಬಿಕೆಗೆ ಅರ್ಹರು. ನಾನೂ ಕಾಂಗ್ರೆಸ್‌ಗೆ ಹಿಂದಿರುಗಲು ಸಚಿವ ಜಮೀರ್, ಅಬ್ದುಲ್ ಜಬ್ಬಾರ್ ಕಾರಣ. ಮುಸ್ಲಿಮರಿಗೆ ಚಿರಋಣಿಯಾಗಿರುತ್ತೇನೆ ಎಂದರು.