ಜಿಲ್ಲೆ

ಅವಕಾಶ ಸದ್ಬಳಕೆಯಾಗಲಿ

ರಾಯಬಾಗ: ದೇವರು ಕೊಟ್ಟ ಜೀವನವನ್ನು ಚೆನ್ನಾಗಿ ರೂಪಿಸಿಕೊಂಡು ಯಶಸ್ವಿಯಾಗಬೇಕೆಂದು ತಹಸೀಲ್ದಾರ್ ಸುರೇಶ ಮುಂಜೆ ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ಪಟ್ಟಣದ ಕೆಎಲ್ಇ ಸಂಸ್ಥೆಯ ಮಲಗೌಡ ಪಾಟೀಲ ವಿಜ್ಞಾನ ಮತ್ತು ವಾಣಿಜ್ಯ ಪಪೂ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ವಾರ್ಷಿಕ ಸ್ನೇಹ ಸಮ್ಮೇಳನ ಕಾರ್ಯಕ್ರಮ ಸೋಮವಾರ ಉದ್ಘಾಟಿಸಿ ಮಾತನಾಡಿ, ಸಿಕ್ಕ ಅವಕಾಶಗಳ ಸದುಪಯೋಗ ಪಡೆಸಿಕೊಳ್ಳಬೇಕು ಎಂದರು.

ಪ್ರಾಚಾರ್ಯ ಡಾ.ಆರ್.ಕೆ.ಪಾಟೀಲ, ಆಡಳಿತ ಮಂಡಳಿ ಸದಸ್ಯರಾದ ಎಂ.ಎಂ.ನಿಶಾಂದಾರ, ಡಿ.ಎಲ್.ಮಿರ್ಜೆ, ವಿ.ಪಿ.ಪಾಟೀಲ, ಎಲ್.ಬಿ.ಪಾಟೀಲ, ಪಿ.ಪಿ.ಪವಾರ, ಎಂ.ಆರ್.ಹೊಸಮನಿ, ಎಸ್.ಬಿ.ಗಸ್ತಿ, ವಿ.ಎ.ಮಂಡಕಿ, ಆರ್.ಎಸ್.ಬುಗಡಿಗಟ್ಟಿ ಇತರರಿದ್ದರು. ಕ್ರೀಡಾಕೂಟದಲ್ಲಿ ಸಾಧನೆಗೈದ ವಿದ್ಯಾರ್ಥಿಗಳನ್ನು ಸತ್ಕರಿಸಲಾಯಿತು.