ಶಹಾಪುರ: ಸರ್ಕಾರಿ ಯೋಜನೆಗಳನ್ನು ಅವಧಿಯೊಳಗೆ ಪೂರ್ಣಗೊಳಿಸಿದರೆ ಗುರಿ ಮುಟ್ಟಲು ಸಾಧ್ಯ. ಇದರಿಂದ ಜನಮನ್ನಣೆ ಕೂಡ ಲಭಿಸುತ್ತದೆ ಎಂದು ವಯೋ ನಿವೃತ್ತಿಯಾದ ಜಿಪಂ ಮುಖ್ಯ ಯೋಜನಾಧಿಕಾರಿ ಗುರುನಾಥ ಗೌಡಪ್ಪನವರ್ ಹೇಳಿದರು.
ಶಹಾಪುರ ತಾಪಂ ಸೇರಿ ವಿವಿಧ ಇಲಾಖೆಗಳ ಸಹಯೋಗದಲ್ಲಿ ಬುಧವಾರ ನಗರದಲ್ಲಿ ಹಮ್ಮಿಕೊಂಡ ಬೀಳ್ಕೊಡುಗೆ ಕರ‍್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ವಿವಿಧ ಇಲಾಖೆ ನೌಕರರು ಒತ್ತಡಕ್ಕೆ ಒಳಗಾಗದೆ ತಾಳ್ಮೆಯಿಂದ ತಮ್ಮ ಕೆಳಹಂತದ ಅಧಿಕಾರಿ ಮತ್ತು ಸಿಬ್ಬಂದಿಯನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡಿದಾಗ ಮಾತ್ರ ಇದು ಸಾಧ್ಯವಾಗಲಿದೆ. ಸರ್ಕಾರ ವಹಿಸಿದ ಕೆಲಸ ಅಚ್ಚುಕಟ್ಟಾಗಿ ನಿರ್ವಹಿಸಿದ ತೃಪ್ತಿ ನನಗಿದೆ. ತಾವು ಕೂಡ ಸಮರ್ಪಣಾ ಭಾವದಿಂದ ಕೆಲಸ ಮಾಡಬೇಕು ಎಂದು ಸಲಹೆ ನೀಡಿದರು.
ವಿವಿಧ ಇಲಾಖೆ ಅಧಿಕಾರಿಗಳಾದ ಸೋಮಶೇಖರ ಬಿರಾದಾರ, ಸುನೀಲ್‌ಕುಮಾರ, ಶಣ್ಮುಖಪ್ಪ, ಭೀಮಣ್ಣಗೌಡ ಬಿರಾದಾರ, ತಿರುಮಲರಡ್ಡಿ ಸುಬ್ಬರಾಯ ಚೌದ್ರಿ ಇತರರಿದ್ದರು.