ಜಿಲ್ಲೆ

ಅವೈಜ್ಞಾನಿಕ ಕಾಮಗಾರಿಗೆ ಡಿಸಿ ತರಾಟೆ

ಮಧುಗಿರಿ: ಪಟ್ಟಣದ ಪುರಸಭೆ ವ್ಯಾಪ್ತಿಯಲ್ಲಿ ಅಮೃತ -2.0 ಯೋಜನೆಯಡಿ ಮನೆ -ಮನೆಗೂ ಶುದ್ಧ ಕುಡಿಯುವ ನೀರು ಸರಬರಾಜು ಮಾಡುವ 40 ಕೋಟಿ ರೂಪಾಯಿ ವೆಚ್ಚದ ಕಾಮಗಾರಿ ಅವೈಜ್ಞಾನಿಕವಾಗಿ ನಡೆಯುತ್ತಿದೆ ಎಂಬ ಸಾರ್ವಜನಿಕ ದೂರುಗಳ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಶುಭಕಲ್ಯಾಣ್​ ಶುಕ್ರವಾರ ಸ್ಥಳ ಪರಿಶೀಲನೆ ನಡೆಸಿ ಸಂಬಂಧಪಟ್ಟ ಅಧಿಕಾರಿಗಳು, ಗುತ್ತಿಗೆದಾರರಿಗೆ ಎಚ್ಚರಿಕೆ ನೀಡಿದರು.

ಪುರಸಭೆ 15ನೇ ವಾರ್ಡಿನಲ್ಲಿ ಯುಜಿಡಿ ಪೈಪ್​ಲೈನ್​ ಮತ್ತು ಅಮೃತ ಯೋಜನೆಯಡಿಯ ಪೈಪ್​ಲೈನ್​ಗಳು ಒಂದಕ್ಕೊಂದು ಸೇರಿಕೊಂಡಿರುವ ಬಗ್ಗೆ ಸ್ಥಳಿಯರು ಜಿಲ್ಲಾಧಿಕಾರಿಯವರಿಗೆ ದೂರವಾಣಿ ಕರೆ ಮಾಡಿ ದೂರು ನೀಡಿದ ಹಿನ್ನೆಲೆ ಸ್ಥಳಕ್ಕೆ ಆಗಮಿಸಿದ ಜಿಲ್ಲಾಧಿಕಾರಿ ಶುಭಕಲ್ಯಾಣ್​, ಸ್ಥಳ ಪರಿಶೀಲನೆ ನಡೆಸಿ ಮುಂದಿನ ದಿನಗಳಲ್ಲಿ ಯುಜಿಡಿಯ ಪೈಪ್​ಲೈನ್​ನಲ್ಲಿ ಹಾದು ಹೋಗುವ ನೀರು ಮತ್ತು ಶುದ್ಧ ಕುಡಿಯುವ ನೀರು ಸೇರಿಕೊಳ್ಳುವ ಸಂಭವ ಹೆಚ್ಚಾಗಿರುವುದನ್ನು ಮನಗಂಡು ಗುತ್ತಿಗೆದಾರರು ಮತ್ತು ಅಧಿಕಾರಿಗಳಿಗೆ ಸಾರ್ವಜನಿಕವಾಗಿ ತರಾಟೆ ತೆಗೆದುಕೊಂಡರು.