ಸಚಿವ ಅಶ್ವತ್ಥನಾರಾಯಣ ಹೇಳಿಕೆ ಖಂಡಿಸಿ ಮೂಡಲಗಿ ಪಟ್ಟಣದ ಕಲ್ಮೇಶ್ವರ ವೃತ್ತದಲ್ಲಿ ಅರಬಾವಿ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಬಿ.ಬಿ.ಹಂದಿಗುಂದ, ಅರವಿಂದ ದಳವಾಯಿ, ವಿ.ಪಿ.ನಾಯಕ, ಸಾಕಿಬ್ ಫಿರೀಜಾದೆ ಇತರರಿದ್ದರು. 
ಜಿಲ್ಲೆ

ಅಶ್ವತ್ಥನಾರಾಯಣ ಹೇಳಿಕೆಗೆ ಆಕ್ರೋಶ

ಮೂಡಲಗಿ: ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಕೊಲೆ ಬೆದರಿಕೆ ಹಾಕಿರುವ ಸಚಿವ ಡಾ. ಸಿ.ಎನ್.ಅಶ್ವತ್ಥನಾರಾಯಣ ಅವರ ವಿರುದ್ಧ ಎ್ಐಆರ್ ದಾಖಲಿಸಿ ಅವರನ್ನು ಕೂಡಲೆ ಬಂಧಿಸಬೇಕು ಎಂದು ಕಾಂಗ್ರೆಸ್ ಮುಖಂಡ ಬಿ.ಬಿ.ಹಂದಿಗುಂದ ಆಗ್ರಹಿಸಿದರು.

ಪಟ್ಟಣದ ಕಲ್ಮೇಶ್ವರ ವೃತ್ತದಲ್ಲಿ ಅರಬಾವಿ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಅವರ ಬಗ್ಗೆ ಹಗುರವಾಗಿ ಮತ್ತು ಪ್ರಚೋದನಕಾರಿಯಾಗಿ ಮಾತನಾಡಿರುವ ಸಚಿವ ಅಶ್ವತ್ಥನಾರಾಯಣ ಅವರನ್ನು ಕೂಡಲೇ ಸಚಿವ ಸಂಪುಟದಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿದರು. ಕಾಂಗ್ರೆಸ್ ಮುಖಂಡ ಅರವಿಂದ ದಳವಾಯಿ ಮಾತನಾಡಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಹೊಡೆದು ಹಾಕಬೇಕು ಎಂದು ಸಚಿವ ಅಶ್ವತ್ಥನಾರಾಯಣ ನೀಡಿರುವ ಪ್ರಚೋದನಕಾರಿ ಹೇಳಿಕೆ ಖಂಡನೀಯ ಎಂದರು. ಕಾರ್ಯಕರ್ತರಾದ ವಿ.ಪಿ.ನಾಯಕ, ಸಾಕಿಬ್ ಫಿರೀಜಾದೆ, ಇರ್ಷಾದ್ ಪೈಲ್ವಾನ್, ರವಿ ಮೂಡಲಗಿ, ಲಕ್ಕಪ್ಪ ಶಾಬನ್ನವರ, ಹನುಮಂತಗೌಡ ಚಿಕ್ಕಗೌಡ, ಲಕ್ಷ್ಮಣ ಆಲಕನೂರ, ಇಮಾಮ್‌ಹುಸೇನ್ ಹುನ್ನೂರ ಇತರರಿದ್ದರು.