ಹಾಸನ: ಗ್ರಾಮೀಣ ಪ್ರದೇಶಗಳಲ್ಲಿ ಅಸ್ಪಶ್ಯತೆ ನಿವಾರಣೆ ಸಂಬಂಧ ಅರಿವು ಮೂಡಿಸಲು ಕ್ರಮ ವಹಿಸುವಂತೆ ಜಿಲ್ಲಾಧಿಕಾರಿ ಸಿ. ಸತ್ಯಭಾಮಾು ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಜಿಲ್ಲಾ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ರಸ್ತೆ ಬದಿಗಳಲ್ಲಿ ಮಳೆ, ಗಾಳಿಗೆ ಬೀಳುವಂತಹ ಸ್ಥಿತಿಯಲ್ಲಿರುವ ಮರಗಳನ್ನು ಗುರುತಿಸಿ ತೆರವು ಗೊಳಿಸಲು ಕ್ರಮವಹಿಸುವಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಜೀತ ವಿಮುಕ್ತರಿಗೆ ಪುನರ್ವಸತಿ ಕಲ್ಪಿಸುವ ನಿಟ್ಟಿನಲ್ಲಿ ಜಾಗ ಗುರುತಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಕಟ್ಟಾಯ ಹೋಬಳಿ ಜವೇನಹಳ್ಳಿ ಗ್ರಾಮದಲ್ಲಿ ಅಂಬೇಡ್ಕರ್ ವಸತಿ ಶಾಲೆ ನಿರ್ಮಾಣಕ್ಕಾಗಿ ಜಾಗ ಗುರುತಿಸಿ ಎಂದು ಹೇಳಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಬಿ.ಆರ್. ಪೂರ್ಣಿಮಾ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ವೆಂಕಟೇಶ್ ನಾಯ್ಡು, ಭೂ ದಾಖಲೆಗಳ ಇಲಾಖೆ ಉಪ ನಿರ್ದೇಶಕರಾದ ಸುಜಯ್, ಸಮಾಜ ಕಲ್ಯಾಣಾಧಿಕಾರಿ ದೂದ್ ಪೀರ್, ಸಮಿತಿ ಸದಸ್ಯರಾದ ಮರಿ ಜೋಸೆಫ್, ಮಲ್ಲೇಶ್ , ನವಿನ್ ಸದಾ, ಶಿವಪ್ಪ ನಾಯಕ, ಶಿವಮ್ಮ ಮತ್ತಿತರರು ಹಾಜರಿದ್ದರು.