ಚಿಕ್ಕಮಗಳೂರಿನ ಜಿಪಂ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಡಿಸಿ ಮೀನಾ ನಾಗರಾಜ್ ಅಧ್ಯಕ್ಷತೆಯಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಸಂಬAಧಿಸಿದAತೆ ಪೂರ್ವ ಸಿದ್ಧತಾ ಸಭೆ ನಡೆಯಿತು. ನಾಗರಾಜು, ಪುಟ್ಟರಾಜು ಉಪಸ್ಥಿತರಿದ್ದರು. 
ಜಿಲ್ಲೆ

ಅಹಿತಕರ ಘಟನೆ ನಡೆಯದಂತೆ ಪರೀಕ್ಷೆ

ಚಿಕ್ಕಮಗಳೂರು: ಪರೀಕ್ಷಾ ಪಾವಿತ್ರö್ಯತೆಯನ್ನು ಕಡ್ಡಾಯವಾಗಿ ಪಾಲಿಸಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಯಾವುದೇ ರೀತಿಯ ತೊಂದರೆಯಾಗದAತೆ ಸುಗಮವಾಗಿ ಪರೀಕ್ಷೆ ನಡೆಸುವಂತೆ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದ ಜಿಪಂನ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ-೧ರ ಸಿದ್ದತೆ ಕುರಿತು ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಎಸ್‌ಎಸ್‌ಎಲ್‌ಸಿ ಪರೀಕ್ಷೆಯು ಮಾರ್ಚ್ ೨೧ ರಿಂದ ಪ್ರಾರಂಭವಾಗಿ ಏಪ್ರಿಲ್ ೪ರ ವರೆಗೆ ನಡೆಯುತ್ತದೆ. ಈ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ಕಂಡು ಬಂದಲ್ಲಿ ಸಂಬAಧಿಸಿದ ಅಧಿಕಾರಿಗಳನ್ನು ಶಿಸ್ತು ಕ್ರಮಕ್ಕೆ ಒಳಪಡಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಈಗಾಗಲೇ ಸೂಚನೆ ನೀಡಿದ್ದು, ಪ್ರತಿ ಪರೀಕ್ಷಾ ಕೇಂದ್ರಗಳಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಕಾರ್ಯ ನಿರ್ವಹಿಸುತ್ತಾರೆ ಎಂದು ತಿಳಿಸಿದರು. ಬಿಸಿಲಿನ ತಾಪ ಹೆಚ್ಚು ಇರುವುದರಿಂದ ಪ್ರಥಮ ಚಿಕಿತ್ಸಾ ವ್ಯವಸ್ಥೆಯೊಂದಿಗೆ ಹಾಜರಾಗುವಂತೆ ತಿಳಿಸಿದ ಅವರು, ಪರೀಕ್ಷೆಯು ವೆಬ್ ಕಾಸ್ಟಿಂಗ್ ಮೂಲಕ ನಡೆಯುತ್ತಿರುವುದರಿಂದ ನಿರಂತರ ವಿದ್ಯುತ್ ವ್ಯವಸ್ಥೆಗೆ ಕೆಇಬಿಗೆ ನಿರ್ದೇಶನ ನೀಡಲಾಗಿದೆ. ಜೊತೆಗೆ ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿಯೂ ಯುಪಿಎಸ್ ವ್ಯವಸ್ಥೆಗೆ ಸಿದ್ದತೆ ಮಾಡಿಕೊಳ್ಳಲು ತಿಳಿಸಿದರು.

ಪರೀಕ್ಷಾ ಪೂರ್ವದಲ್ಲಿ ಹಾಗೂ ಪರೀಕ್ಷೆಯಲ್ಲಿ ಜಿಲ್ಲೆಯ ಬಗ್ಗೆ ವ್ಯತಿರಿಕ್ತ ವರದಿ ಬರಬಾರದು. ಗುಣಮಟ್ದ ಫಲಿತಾಂಶದ ಮೂಲಕ ಜಿಲ್ಲೆಯು ಸುದ್ದಿಯಾಗಬೇಕು ಎಂದು ಹೇಳಿದರು.

ಪರೀಕ್ಷಾ ಕಾರ್ಯಕ್ಕೆ ನಿಯೋಜಿಸಲ್ಪಟ್ಟ ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗ ಪರೀಕ್ಷಾ ಕಾರ್ಯ ಪೂರ್ಣಗೊಳ್ಳುವವರೆಗೂ ಪರೀಕ್ಷಾ ಕೇಂದ್ರದಲ್ಲಿ ಹಾಜರಿದ್ದು, ಪರೀಕ್ಷಾ ಪಾವಿತ್ರö್ಯತೆಯನ್ನು ಪಾಲಿಸಬೇಕು. ಜೊತೆಗೆ ಉಪನಿರ್ದೇಶಕರು ಆಡಳಿತ ಮತ್ತು ಉಪನಿರ್ದೇಶಕರು ಅಭಿವೃದ್ದಿ ಅವರು ಪರೀಕ್ಷಾ ಕಾರ್ಯ ಸುವ್ಯವಸ್ಥಿತವಾಗಿ ನಿರ್ವಹಿಸಿ, ಪಾರದರ್ಶಕತೆ ಕಾಯ್ದಕೊಳ್ಳುವಂತೆ ತಿಳಿಸಿದರು.

ಜಿಲ್ಲಾ ನೋಡಲ್ ಅಧಿಕಾರಿಗಳಾದ ನಾಗರಾಜು ಅವರು ಪರೀಕ್ಷಾ ವ್ಯವಸ್ಥೆಯ ಬಗ್ಗೆ ಮಾಹಿತಿ ನೀಡಿ, ಪರೀಕ್ಷಾ ಕೇಂದ್ರದಲ್ಲಿ ಒಂದು ಕೊಠಡಿಗೆ ತಲಾ ೨೪ರಂತೆ ವಿದ್ಯಾರ್ಥಿಗಳಿಗೆ ಆಸನ ವ್ಯವಸ್ಥೆ ಮಾಡಲಾಗಿದೆ. ವಿಶೇಷ ಚೇತನ ಮಕ್ಕಳಿಗೆ ಕೆಳಹಂತದ ಪರೀಕ್ಷಾ ಕೊಠಡಿಗಳನ್ನು ಮೀಸಲಿಡಬೇಕು. ಕೇಂದ್ರದಲ್ಲಿ ಎಲ್ಲಾ ಮೂಲಭೂತ ಸೌಲಭ್ಯಗಳು ಕಲ್ಪಿಸಬೇಕು. ಪ್ರತಿ ಪರೀಕ್ಷಾ ಕೇಂದ್ರಗಳಲ್ಲಿ ವೇಗದ ಇಂಟರ್ ನೆಟ್ ವ್ಯವಸ್ಥೆ, ವೆಬ್ ಕಾಸ್ಟಿಂಗ್ ವ್ಯವಸ್ಥೆ, ಪರೀಕ್ಷಾ ಕೇಂದ್ರದ ಮುಖ್ಯಸ್ಥರು ತಮ್ಮ ಲಾಗಿನ್‌ನಲ್ಲಿಯೇ ಗೈರು ಹಾಜರಿ ಮಾಹಿತಿಯನ್ನು ಮತ್ತು ನಮೂನೆಯನ್ನು ಭರ್ತಿ ಮಾಡುವ ಬಗ್ಗೆ ತಿಳಿಸಿದರು.

ಸಭೆಯಲ್ಲಿ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಪುಟ್ಟರಾಜು, ಜಿಲ್ಲೆಯ ಎಲ್ಲಾ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಡಯಟ್‌ನ ಹಿರಿಯ ಉಪನ್ಯಾಸಕರು ಮತ್ತು ಉಪನ್ಯಾಸಕರು, ಕ್ಷೇತ್ರ ಸಮನ್ವಯಾಧಿಕಾರಿಗಳು, ಬ್ಲಾಕಿನ ನೋಡಲ್ ಅಧಿಕಾರಿಗಳು,ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರು ಉಪಸ್ಥಿತರಿದ್ದರು.