ಜಿಲ್ಲೆ

ಆ.12ರಂದು ಉಚಿತ ವೈದ್ಯಕೀಯ ಶಿಬಿರ

ಹಾಸನ: ನವಕೀಸ್ ತಾಂತ್ರಿಕ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಮೈಸೂರಿನ ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆ (ಎಐಐಎಸ್‌ಎಚ್) ಸಹಯೋಗದಲ್ಲಿ ಆ.12ರ ಸೋಮವಾರ ಕಾಲೇಜಿನ ಆವರಣದಲ್ಲಿ ಒಂದು ದಿನದ ಉಚಿತ ವೈದ್ಯಕೀಯ ಶಿಬಿರವನ್ನು ಆಯೋಜಿಸಿದೆ. ವಾಕ್ (ಮಾತು) ಮತ್ತು ಶ್ರವಣ (ಕಿವಿ)ದೋಷ ಉಳ್ಳವರು ಈ ಶಿಬಿರದಲ್ಲಿ ಭಾಗವಹಿಸಬಹುದು. ಶ್ರವಣ ಸಾಧನಗಳನ್ನು 500 ರೂ. ರಿಯಾಯಿತಿ ದರದಲ್ಲಿ ಪಡೆಯಬಹುದು. ಈ ಕೊಡುಗೆ ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಮಾತ್ರ ಸೀಮಿತವಾಗಿದೆ. ಶಿಬಿರದಲ್ಲಿ ಪಾಲ್ಗೊಳ್ಳುವವರು ತಮ್ಮೊಂದಿಗೆ ಆಧಾರ್ ಕಾರ್ಡ್ ಹಾಗೂ ಪಾಸ್‌ಪೋರ್ಟ್ ಅಳತೆಯ 2 ಫೋಟೋಗಳನ್ನು ತರಬೇಕು. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 9844270538 ಸಂಪರ್ಕಿಸಬಹುದು ಎಂದು ಕಾಲೇಜಿನ ಆಡಳಿತ ಮಂಡಳಿ ಪ್ರಕಟಣೆ ಮೂಲಕ ತಿಳಿಸಿದೆ.