ಜಿಲ್ಲೆ

ಆ.20 ರಂದು ಡಿ.ದೇವರಾಜ ಅರಸು ಜನ್ಮದಿನಾಚರಣೆ

ಬಾಗಲಕೋಟೆ: ರಾಜ್ಯದ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸುರವರ 108ನೇ ಜನ್ಮ ದಿನಾಚರಣೆಯನ್ನು ಇದೇ ಆಗಸ್ಟ 20 ರಂದು ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಪರಶುರಾಮ ಸಿನ್ನಾಳಕರ ತಿಳಿಸಿದರು.

ಜಿಲ್ಲಾಧಿಕಾರಿ ಕಛೇರಿ ಸಭಾಂಗಣದಲ್ಲಿ ನಡೆದ ಡಿ.ದೇವರಾಜ ಅರಸು ಜನ್ಮ ದಿನಾಚರಣೆಯನ್ನು ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಆಗಸ್ಟ 20 ರಂದು ಅರಸು ಜನ್ಮ ದಿನಾಚರಣೆಯನ್ನು ತಾಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ಕಡ್ಡಾಯವಾಗಿ ಆಚರಿಸತಕ್ಕದ್ದು, ಇದಕ್ಕಾಗಿ ಪೂರ್ವ ಸಿದ್ಧತೆಗಳನ್ನು ಮಾಡಿಕೊಂಡು ಕಾರ್ಯಕ್ರಮಕ್ಕೆ ಆಹ್ವಾನ ಪತ್ರಿಕೆಗಳನ್ನು ಮುದ್ರಿಸಿ ಜನಪ್ರತಿನಿಧಿಗಳಿಗೆ ಶಿಷ್ಠಾಚಾರದಂತೆ ನೀಡಿ ಆಹ್ವಾನಿಸಬೇಕು ಮತ್ತು ಎಲ್ಲೂ ಕೂಡ ಲೋಪ ದೋಷಗಳಾಗಂತೆ ನೋಡಿಕೊಳ್ಳಬೇಕು ಎಂದರು.

ಕಾರ್ಯಕ್ರಮದಲ್ಲಿ ಡಿ.ದೇವರಾಜ ಅರಸು ಕುರಿತು ವಿಶೇಷ ಉಪನ್ಯಾಸ ಏರ್ಪಡಿಸುವುದು. 2022-23ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಸ್ನಾತಕೋತ್ತರ ಪದವಿಯಲ್ಲಿ ಜಿಲ್ಲಾ ಮಟ್ಟದಲ್ಲಿ ಅತ್ಯಂತ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಬೇಕು. ವಿದ್ಯಾರ್ಥಿ ನಿಲಯಗಳ ನಿಲಯಾರ್ಥಿಗಳಿಗೆ ಪ್ರಬಂಧ, ಭಾಷಣ, ಕ್ರೀಡಾ ಸ್ಪರ್ಧೆಗಳನ್ನು ಆಯೋಜಿಸಿ ಬಹುಮಾನಗಳನ್ನು ನೀಡಬೇಕು. ಅದೇ ರೀತಿ ವಿದ್ಯಾರ್ಥಿ ಅಂದು ನಿಲಯಗಳಲ್ಲಿ ಸಸಿ ನಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳುವ ಮೂಲಕ ಒಟ್ಟಾರೆ ಅರಸು ಜನ್ಮವನ್ನು ಅರ್ಥಪೂರ್ಣವಾಗಿ ಆಚರಿಸಬೇಕೆಂದು ಹೇಳಿದರು.

ಈ ಸಂದರ್ಭದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ರಮೇಶ ಚವ್ಹಾನ್, ಆಹಾರ ಇಲಾಖೆಯ ಜಂಟಿ ನಿರ್ದೇಶಕ ಚನ್ನಬಸಪ್ಪ ಕೊಡ್ಲಿ, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ಕರ್ಣಕುಮಾರ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.