ಚಾಮರಾಜನಗರ: ಕರ್ನಾಟಕ ಸಾಹಿತ್ಯ ಅಕಾಡೆಮಿ, ಗುಂಡ್ಲುಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕನ್ನಡ ವಿಭಾಗ ಹಾಗೂ ಚಕೋರ ಸಾಹಿತ್ಯ ವಿಚಾರ ವೇದಿಕೆ ಸಹಯೋಗದಲ್ಲಿ ಸ್ವಾತಂತ್ರ್ಯ ಚಳುವಳಿ-ಕನ್ನಡ ಸಾಹಿತ್ಯ ಕುರಿತ ಉಪನ್ಯಾಸ ಕಾರ್ಯಕ್ರಮವನ್ನು ಆ.22ರಂದು ಬೆಳಗ್ಗೆ 10.30 ಗಂಟೆಗೆ ಗುಂಡ್ಲುಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಹಿರಿಯ ಸಾಹಿತಿಗಳು ಹಾಗೂ ನಿವೃತ್ತ ಆರೋಗ್ಯ ಶಿಕ್ಷಣ ಅಧಿಕಾರಿಗಳಾದ ಕೆ. ವೆಂಕಟರಾಜು ಉಪನ್ಯಾಸ ನೀಡುವರು. ಗುಂಡ್ಲುಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಪ್ರೊ. ಜಿ.ಬಿ. ಪವಿತ್ರ ಅಧ್ಯಕ್ಷತೆ ವಹಿಸುವರು. ಸಾಹಿತಿಗಳು-ಚಲನಚಿತ್ರ ನಿರ್ದೇಶಕ ಹಾಗೂ ಕರ್ನಾಟಕ ಸಾಹಿತ್ಯ ಅಕಾಡೆಮಿಯ ಸದಸ್ಯ ಪ್ರಕಾಶರಾಜ್ ಮೇಹು ಪ್ರಾಸ್ತಾವಿಕ ನುಡಿಗಳನ್ನಾಡುವರು. ಸುಗಮ ಸಂಗೀತ ಗಾಯಕ ಸಿ.ಎಂ. ನರಸಿಂಹಮೂರ್ತಿ ಪಾಲ್ಗೊಳ್ಳುವರು ಎಂದು ಪ್ರಕಟಣೆ ತಿಳಿಸಿದೆ.