ಜಿಲ್ಲೆ

ಆ.2ರಿಂದ ರಾಜ್ಯ ಮಟ್ಟದ ಫಿಡೆ ರೇಟೆಡ್ ಚೆಸ್ ಪಂದ್ಯಾವಳಿ

ಹಾಸನ: ಜಿಲ್ಲಾ ಚೆಸ್ ಅಸೋಸಿಯೇಷನ್, ಕದಂಬ ಚೆಸ್ ಅಕಾಡೆಮ್, ವೆಟರ್ನರಿ ಕಾಲೇಜು ಹಾಗೂ ಎನ್.ಟ್.ಆರ್. ಚಾರಿಟಬಲ್ ಟ್ರಸ್ಟ್ ಇವರ ಪ್ರಾಯೋಜಕತ್ವದಲ್ಲಿ ಆ.2ರಿಂದ 4ವರೆಗೆ 19 ವರ್ಷದೊಳಗಿನ ಬಾಲಕ ಹಾಗೂ ಬಾಲಕಿಯರ ರಾಜ್ಯ ಮಟ್ಟದ ಫಿಡೆ ರೇಟೆಡ್ ಚೆಸ್ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ ಎಂದು ಎಂದು ಜಿಲ್ಲಾ ಚೆಸ್ ಅಸೋಸಿಯೇಷನ್ ಕಾರ್ಯದರ್ಶಿ ಎಂ.ಟಿ. ತ್ಯಾಗರಾಜ್ ತಿಳಿಸಿದರು.
ನಗರದ ವೆಟರ್ನರಿ ಕಾಲೇಜಿನಲ್ಲಿ ಮೂರು ದಿನಗಳ ಚೆಸ್ ಪಂದ್ಯಾವಳಿಯನ್ನು ಏರ್ಪಡಿಸಲಾಗಿದ್ದು, ರಾಜ್ಯದ ಹಲವು ಜಿಲ್ಲೆಗಳಿಂದ 250ರಿಂದ300 ಜನ ಆಟಗಾರರು ಆಗಮಿಸುತ್ತಾರೆ. ಈ ಚೆಸ್ ಪಂದ್ಯಾವಳಿಯಲ್ಲಿ ಬಾಲಕ ಮತ್ತು ಬಾಲಕಿಯರ ವಿಭಾಗದಲ್ಲಿ ಪ್ರತ್ಯೇಕವಾಗಿ 9 ಸುತ್ತುಗಳಿದ್ದು, ಅದರಲ್ಲಿ ಮೊದಲ 4 ಸ್ಥಾನ ಪಡೆದು ವಿಜೇತರಾದ ಸ್ಪರ್ಧಿಗಳು ಸೆ.20ರಿಂದ ಹರಿಯಾಣದಲ್ಲಿ ರಾಷ್ಟ್ರೀಯ ಮಟ್ಟದ ಚೆಸ್ ಚೆಸ್ ಪಂದ್ಯಾವಳಿಯಲ್ಲಿ ರಾಜ್ಯವನ್ನು ಪ್ರತಿನಿಧಿಸಲಿದ್ದಾರೆ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಕದಂಬ ಚೆಸ್ ಅಕಾಡೆಮಿಯ ಅಧ್ಯಕ್ಷೆ ರತ್ನ ಕಿರಣ್ ಮಾತನಾಡಿ, ಬಾಲಕ ಹಾಗೂ ಬಾಲಕಿಯರ ರಾಜ್ಯ ಮಟ್ಟದ ಫಿಡೆ ರೇಟೆಡ್ ಚೆಸ್ ಪಂದ್ಯಾವಳಿಯಲ್ಲಿ ವಿಜೇತರಾದ ನಾಲ್ಕು ಜನರನ್ನು ಆಯ್ಕೆ ಮಾಡಿ ಅವರನ್ನು ರಾಷ್ಟ್ರೀಯ ಮಟ್ಟದ ಚೆಸ್ ಪಂದ್ಯಾವಳಿ ಬಾಗವಹಿಸುತ್ತಾರೆ.ಹೆಚ್ಚಿನ ಸಂಖ್ಯೆಯಲ್ಲಿ ಆಟಗಾರರು ಆಗಮಿಸುವಂತೆ ವಿನಂತಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಕದಂಬ ಚೆಸ್ ಅಕಾಡೆಮಿಯ ಉಪಾಧ್ಯಕ್ಷ ಮಂಜುನಾಥ್ ಪ್ರಸಾದ್, ಸಹ ಕಾರ್ಯದರ್ಶಿ ರಾಧ ಜಗದೀಶ್. ಚನ್ನಪಟ್ಟಣ ಶಾಖೆಯ ತರಬೇತುದಾರ ಕಾವ್ಯ ಚಂದನ್, ಹೇಮಾವತಿ ನಗರ ಶಾಖೆಯ ತರಬೇತುದಾರ ನಯನ ಸತೀಶ್ ಇದ್ದರು.