ಜಿಲ್ಲೆ

ಆ.31 ರಂದು ಶ್ರೀಭಗೀರಥ ಭವನಕ್ಕೆ ಶಂಕುಸ್ಥಾಪನೆ

ಚಾಮರಾಜನಗರ: ನಂಜನಗೂಡು ತಾಲೂಕು ಉಪ್ಪಾರ ಸಂಘದ ವತಿಯಿಂದ ಆ.31 ರಂದು ಶ್ರೀಭಗೀರಥ ಭವನ ನಿರ್ಮಾಣಕ್ಕೆ ಶಂಕುಸ್ಥಾಪನೆ, ಶ್ರೀಭಗೀರಥ ಜಯಂತಿ ಹಾಗೂ ಬೃಹತ್ ಸಮಾವೇಶ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಚಾಮರಾಜನಗರ ಜಿಲ್ಲಾ ಉಪ್ಪಾರ ಯುವಕರ ಸಂಘದ ಅಧ್ಯಕ್ಷ ಎಂ.ಜಯಕುಮಾರ್ ತಿಳಿಸಿದರು.

ನಂಜನಗೂಡು ಶ್ರೀಕಂಠೇಶ್ವರಸ್ವಾಮಿ ದೇವಸ್ಥಾನದ ಮುಂಭಾಗ ಬೆಳಗ್ಗೆ 10.30 ಗಂಟೆಗೆ ಶ್ರೀಭಗೀರಥ ಭವನಕ್ಕೆ ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಶಂಕುಸ್ಥಾಪನೆ ನೆರವೇರಿಸುವರು. ಬಳಿಕ ಜೂನಿಯರ್ ಕಾಲೇಜು ಆವರಣದಲ್ಲಿ ಬೆಳಗ್ಗೆ 11 ಗಂಟೆಗೆ ಶ್ರೀಭಗೀರಥ ಭಾವಚಿತ್ರ ಮೆರವಣಿಗೆಗೆ ಸಂಸದ ಸುನೀಲ್ ಬೋಸ್ ಚಾಲನೆ ನೀಡುವರು. ಮಧ್ಯಾಹ್ನ 3 ಗಂಟೆಗೆ ಪ್ರಾರಂಭವಾಗುವ ವೇದಿಕೆ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸುವರು. ಹೊಸದುರ್ಗ ಶ್ರೀಭಗೀರಥ ಪೀಠದ ಶ್ರೀಡಾ.ಪುರುಷೋತ್ತಮಾನಂದಪುರಿ ಸ್ವಾಮೀಜಿ ಸಾನಿಧ್ಯವಹಿಸುವರು. ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ ಉಪಸ್ಥಿತರಿರುವರು. ಶಾಸಕ ಸಿ.ಪುಟ್ಟರಂಗಶೆಟ್ಟಿ ನಾಮಲಕ ಅನಾವರಣಗೊಳಿಸುವರು. ನಂಜನಗೂಡು ಶಾಸಕ ದರ್ಶನ್ ಧ್ರುವನಾರಾಯಣ್ ಅಧ್ಯಕ್ಷತೆ ವಹಿಸುವರು ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಶಾಸಕರಾದ ಎ.ಆರ್.ಕೃಷ್ಣಮೂರ್ತಿ, ಅನಿಲ್ ಚಿಕ್ಕಮಾಧು, ಎಚ್.ಎಂ.ಗಣೇಶ್ ಪ್ರಸಾದ್, ಕೆ.ರವಿಶಂಕರ್, ಮಾಜಿ ಶಾಸಕ ಬಿ.ಹರ್ಷವರ್ಧನ್, ಕಳಲೆ ಕೇಶವಮೂರ್ತಿ ಮುಖ್ಯಅತಿಥಿಗಳಾಗಿ ಭಾಗವಹಿಸುವರು. ಈ ಕಾರ್ಯಕ್ರಮಕ್ಕೆ ಜಿಲ್ಲೆಯಿಂದ ಸುಮಾರು 5000 ಜನರು ಭಾಗವಹಿಸಲಿದ್ದು, ಶಾಸಕ ದರ್ಶನ್ ಧ್ರುವನಾರಾಯಣ್ ಶ್ರಮದ ಲವಾಗಿ ಸಾಕಷ್ಟು ವರ್ಷಗಳ ಬೇಡಿಕೆಯಾದ ಶ್ರೀಭಗೀರಥ ಭವನ ನಿರ್ಮಾಣಕ್ಕೆ ಶಂಕುಸ್ಥಾಪನೆಯಾಗುತ್ತಿದೆ ಎಂದರು.

ಗೋಷ್ಠಿಯಲ್ಲಿ ಉಪ್ಪಾರ ಯುವಕ ಸಂಘದ ಪ್ರಧಾನ ಕಾರ್ಯದರ್ಶಿ ಸಿ.ಎಸ್.ನಾಗರಾಜು, ಶಿವಕುಮಾರ್, ಗಡಿ ಯಜಮಾನ ಮಹದೇವಶೆಟ್ಟಿ, ಗ್ರಾಮಾಂತರ ಯುವ ಕಾಂಗ್ರೆಸ್ ಅಧ್ಯಕ್ಷ ಶ್ರೀನಿವಾಸ್ ಹಾಜರಿದ್ದರು.