ಜಿಲ್ಲೆ

ಆಕಸ್ಮಿಕ ಬೆಂಕಿಗೆ ಅಪಾರ ಪ್ರಮಾಣದ ಗಿಡ-ಮರಗಳು ನಾಶ

ಚಾಮರಾಜನಗರ: ನಗರದ ಹೊರವಲಯದಲ್ಲಿರುವ ಅರಣ್ಯ ಪ್ರದೇಶದಲ್ಲಿ ಆಕಸ್ಮಿಕ ಬೆಂಕಿ ತಗುಲಿ ಅಪಾರ ಪ್ರಮಾಣದ ಗಿಡ-ಮರಗಳು ಸುಟ್ಟು ಹೋಗಿದೆ.

ಚಾಮರಾಜನಗರ ವಿಶ್ವವಿದ್ಯಾಲಯ ಹಾಗೂ ಬದನಗುಪ್ಪೆ-ಕೆಲ್ಲಂಬಳ್ಳಿ ಕೈಗಾರಿಕಾ ಪ್ರದೇಶವನ್ನು ಒಳಗೊಂಡಂತೆ ಇರುವ ಅರಣ್ಯ ಪ್ರದೇಶದಲ್ಲಿ ಮಂಗಳವಾರ ಮಧ್ಯಾಹ್ನದ ವೇಳೆಯಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು, ಸಾವಿರಾರು ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಕುರುಚಲು ಗಿಡಗಳು ಹಾಗೂ ಅನೇಕ ಗಿಡ-ಮರಗಳು ಸುಟ್ಟು ಹೋಗಿದೆ.

ವಿಶ್ವ ವಿದ್ಯಾಲಯದ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಬೆಂಕಿ ನಂದಿಸಲು ಕೆಲಕಾಲ ಪ್ರಯತ್ನ ಪಟ್ಟರೂ ಯಾವುದೇ ಪ್ರಯೋಜನವಾಗಲಿಲ್ಲ. ಈ ವೇಳೆ ಅಗ್ನಿ ಶಾಮಕ ದಳದ ಸಿಬ್ಬಂದಿಗಳಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ 2 ವಾಹನಗಳಲ್ಲಿ ಆಗಮಿಸಿದ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಬೆಂಕಿಯನ್ನು ನಂದಿಸಲು ಯಶಸ್ವಿಯಾದರು.