ಜಿಲ್ಲೆ

ಆಕ್ಷೇಪಣೆ ಸಲ್ಲಿಕೆಗೆ ಅವಕಾಶ

ಚಾಮರಾಜನಗರ: ಕೊಳ್ಳೇಗಾಲ ನಗರಸಭಾ ವ್ಯಾಪ್ತಿಯಲ್ಲಿ ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ (ಮುನಿಸಿಪಾಲಿಟಿ) ಯೋಜನೆ ಹಂತ-4ರಡಿ ಪದವಿ ವ್ಯಾಸಂಗ ಮಾಡುತ್ತಿರುವ ಪೌರಕಾರ್ಮಿಕರ ಮಕ್ಕಳಿಗೆ ಲ್ಯಾಪ್‌ಟಾಪ್ ವಿತರಣೆ ಸಂಬಂಧ ಆಯ್ಕೆಯಾಗಿರುವ ಫಲಾನುಭವಿಗಳ ಪಟ್ಟಿಯನ್ನು ನಗರಸಭಾ ಕಚೇರಿಯ ನಾಮಫಲಕದಲ್ಲಿ ಪ್ರಕಟಿಸಲಾಗಿದ್ದು, ಆಕ್ಷೇಪಣೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಆ.4 ರಂದು ಅಗತ್ಯ ದಾಖಲೆಗಳನ್ನು ಸಲ್ಲಿಸಿ ಆಯ್ಕೆಯಾಗಿರುವ ಫಲಾನುಭವಿಗಳ ಪಟ್ಟಿಯನ್ನು ನಗರಸಭಾ ಕಚೇರಿಯ ನಾಮಫಲಕದಲ್ಲಿ ಪ್ರಕಟಿಸಲಾಗಿದೆ. ವಿದ್ಯಾರ್ಥಿಗಳು ಪೌರಕಾರ್ಮಿಕರ ಮಕ್ಕಳು/ಅವಲಂಬಿತರಾಗಿದ್ದು ಈ ಕುರಿತು ಆಕ್ಷೇಪಣೆಗಳಿದ್ದಲ್ಲಿ 3 ದಿನಗಳೊಳಗಾಗಿ ಲಿಖಿತವಾಗಿ ನಗರಸಭಾ ಕಚೇರಿಗೆ ಸಲ್ಲಿಸಬೇಕು. ಇಲ್ಲವಾದಲ್ಲಿ ಈ ಫಲಾನುಭವಿಗಳ ಪಟ್ಟಿಯು ಅಂತಿಮವಾಗಿರುತ್ತದೆ ಎಂದು ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.